LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇದಾರನಾಥ ಸಮೀಪ ಭೀಕರ ಭೂಕುಸಿತ..! ಮೂವರು ಸಾವು, ಹಲವರಿಗೆ ಗಂಭೀರ ಗಾಯ

 ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೇದಾರನಾಥ ಸಮೀಪ ಭೂಕುಸಿತದಿಂದಾಗಿ ಮೂವರು ಯಾತ್ರಿಕರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ.

ಮೃತಪಟ್ಟವರಲ್ಲಿ ಇಬ್ಬರು ಮಹಾರಾಷ್ಟ್ರ ಮೂಲದ ಅರುಣ್‌ ಪರಾಠೆ ಮತ್ತು ಸುನಿಲ್‌ ಮಹಾದೇವ್‌ ಕಾಲೆ ಎಂದು ಗುರುತಿಸಲಾಗಿದೆ. ಮತ್ತೋರ್ವನನ್ನು ರುದ್ರಪ್ರಯಾಗ್‌ ಮೂಲದ ಅನುರಾಗ್‌ ಬಿಶ್ತ್‌ ಎಂದು ಗುರುತಿಸಲಾಗಿದೆ.ಯಾತ್ರಿಕರು ಭಾನುವಾರ ಬೆಳಗ್ಗೆ ಗೌರಿಕುಂಡಾದಿಂದ ಪ್ರಯಾಣ ಆರಂಭಿಸಿದ್ದರು. ಚಿರ್‌ಬಾಸಾ ಪ್ರದೇಶದ ಸಮೀಪ ಭಾರೀ ಭೂ ಕುಸಿತ ಸಂಭವಿಸಿದ್ದು, ಮೂವರು ಯಾತ್ರಿಕರು ಸ್ಥಳದಲ್ಲೇ ಮೃತಪಟ್ಟಿದಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು, ವಿಪತ್ತು ನಿರ್ವಹಣಾ ಪಡೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರ್ಗ ಮಧ್ಯೆ ಸಿಲುಕಿದ ಯಾತ್ರಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆ