LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ರಾಜ್ಯ ಸರ್ಕಾರ ನೀಡಲಿದೆ'- ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಅವರು, ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

ಕೇರಳದ ವಯನಾಡು ಪ್ರಕೃತಿ ವಿಕೋಪದಿಂದ ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ಕನಿಷ್ಠ 400ಕ್ಕೂ ಹೆಚ್ಚು ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎನ್ನಲಾಗಿದೆ. ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದ್ದು ಭರದಿಂದ ಕಾರ್ಯಚರಣೆ ನಡೆಯುತ್ತಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST