ಕೇರಳದಲ್ಲಿ ಹಕ್ಕಿಜ್ವರ ಪತ್ತೆ, ಕರ್ನಾಟಕದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ!
ಬೆಂಗಳೂರು/ ದಕ್ಷಿಣ ಕನ್ನಡ : ಹೆಚ್ 5 ಎನ್ 1 ಎಂಬ ಹೆಸರಿನ ಮಾರಕ ಹಕ್ಕಿಜ್ವರ ಕೇರಳದಲ್ಲಿ ಕಾಣಿಸಿಕೊಂಡಿದ್ದು, ಕೇರಳ ರಾಜ್ಯದ ಗಡಿಗೆ ಹೊಂದಿಕೊಂಡಂತಿರೋ ನಮ್ಮ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಇದೀಗ ಆತಂಕ ಮೂಡಿಸಿದೆ. ನರೆಯ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ಪತ್ತೆಯಾಗಿದ್ದು ಮುನ್ನೆಚ್ಚರಿಕೆ ಕ್ರಮವೆಂಬಂತೆ ದಕ್ಷಿಣ ಕನ್ನಡ ಜಿಲ್ಲೆಯ ತಲಪ್ಪಾಡಿ, ಜಾಲ್ಸೂರು, ಸಾರಡ್ಕ ಸೇರಿದಂತೆ ಮತ್ತೆ ಕೆಲವೆಡೆ ಹಕ್ಕಿ ಜ್ವರ ಹರಡದಂತೆ ತಡೆಯುವ ನಿಟ್ಟಿನಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿಗಳ ಕಚೇರಿ ಮೂಲಗಳು ತಿಳಿಸಿವೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.