LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೈಮಗ್ಗ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ

 

ಚಿತ್ರದುರ್ಗ: 2024-25ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ.) ಕೋರ್ಸ್ ಕಲಿಕೆಗಾಗಿ 44 ಪುರುಷ, ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ)-22, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು)-17, ಎಸ್.ಪಿ.ಕೆ.ಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ ಆಂದ್ರಪ್ರದೇಶ)-03 ಹಾಗೂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ)-02 ಅಭ್ಯರ್ಥಿಗಳು ಸೇರಿದಂತೆ ಒಟ್ಟು 44 ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸೆಲಿಂಗ್ ಕರೆಯಲಾಗುವುದು.

ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್‍ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2024 ಜುಲೈ 01 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ವಯೋಮಾನದಲ್ಲಿರಬೇಕು ಹಾಗೂ ಪ.ಜಾತಿ, ಪ.ಪಂಗಡ ವರ್ಗದ ಅಭ್ಯರ್ಥಿಗಳು 15 ರಿಂದ 25 ವಯೋಮಾನದವರಾಗಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿ ಅನ್ವಯ ಪ್ರತಿ ವಿದ್ಯಾರ್ಥಿಗೆ ಮಾಸಿಕ ರೂ.2500/ ಶಿಷ್ಯವೇತನ ನೀಡಲಾಗುವುದು ಹಾಗೂ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಿಕೊಡಲಾಗುತ್ತದೆ.

ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯಯ ಭಾಗ್ಯ ಕಾಂಪ್ಲೆಕ್ಸ್, ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರ ಕಚೇರಿಯ ದೂರವಾಣಿ ಸಂಖ್ಯೆ 08194-221426ಗೆ ಸಂಪರ್ಕಿಸಬಹುದು.

ಅರ್ಜಿಗಳನ್ನು  https://khtigadag.ac.in/AdmissionForm.pdf   ತಂತ್ರಾಂಶದಲ್ಲಿ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ 15 ರೊಳಗಾಗಿ ಚಿತ್ರದುರ್ಗ ಕಚೇರಿಗೆ ಅಥವಾ ಮೇ.31 ರೊಳಗೆ ಗದಗ ಜಿಲ್ಲೆಯ ನರಸಾಪುರ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಪ್ರಾಂಶುಪಾಲರಿಗೆ (ದೂರವಾಣಿ:08732-297221) (ಮೊಬೈಲ್ ನಂ: 9449162822) ನೇರವಾಗಿ ಅರ್ಜಿ ಸಲ್ಲಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST