LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಂದ ಅರ್ಜಿ ಆಹ್ವಾನ

 

ಚಿತ್ರದುರ್ಗ: ಕೈಮಗ್ಗ ಮತ್ತು ಜವಳಿ ಇಲಾಖೆಯು ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರುಗಳಿಗೆ ಹಾಗೂ ಕೈಮಗ್ಗ ನೇಕಾರರಿಗೆ ಸಂಬಂಧಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕ ರೂ.5000/- ಗಳನ್ನು ನೀಡಲು ನೇಕಾರರ ಸಮ್ಮಾನ್ ಯೋಜನೆಯಡಿ 2024-25ನೇ ಸಾಲಿಗೆ ಈಗಾಗಲೇ ನೊಂದಾಯಿತವಾಗಿರುವ ಅರ್ಹ ಕೈಮಗ್ಗ, ವಿದ್ಯುತ್ ಮಗ್ಗ ನೇಕಾರರಿಂದ ಹೊಸದಾಗಿ ಅರ್ಜಿ ಪಡೆದು ಅರ್ಹವಿರುವ ನೇಕಾರರ ಅರ್ಜಿಗಳನ್ನು ಸೇವಾ ಸಿಂಧು ಪೆÇೀರ್ಟಲ್‍ನಲ್ಲಿ ಅಪ್‍ಲೋಡ್ ಮಾಡಲು ಕೇಂದ್ರ ಕಚೇರಿ ಪತ್ರದಲ್ಲಿ ಸೂಚಿಸಲಾಗಿದೆ.

ಅದರಂತೆ 2023-24ನೇ ಸಾಲಿನಲ್ಲಿ ಈ ಯೋಜನೆಯಡಿ ಈಗಾಗಲೇ ಸೌಲಭ್ಯ ಪಡೆದಿರುವ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಪಟ್ಟಿಯಲ್ಲಿ ನೊಂದಾಯಿತ ಕೈಮಗ್ಗ ನೇಯ್ಗೆ, ವಿದ್ಯುತ್ ಮಗ್ಗ ನೇಯ್ಗೆ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ನೇಕಾರರಿಂದ, 2024ರ ಅ.20ರೊಳಗಾಗಿ  ಅರ್ಜಿ ಸಲ್ಲಿಸುವಂತೆ ಪತ್ರಿಕಾ ಪ್ರಕಟಣೆ ಹೊಡಿಸಲಾಗಿತ್ತು. ಇನ್ನೂ ಹಲವಾರು ನೇಕಾರರು ಅರ್ಜಿ ಸಲ್ಲಿಸದೇ ಇರುವುದರಿಂದ ಅರ್ಜಿ ಸಲ್ಲಿಸಲು ಇನ್ನೂ ಕಾಲಾವಕಾಶ ಅವಶ್ಯಕತೆ ಇರುವುದನ್ನು ಮನಗಂಡು ಅರ್ಜಿ ಸಲ್ಲಿಕೆ ಅವಧಿಯನ್ನು 2024ರ ನ.10ರೊಳಗಾಗಿ ಅರ್ಜಿ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಬಿ.ಡಿ.ರಸ್ತೆ, ಯುನಿಯನ್ ಪಾರ್ಕ್ ಹತ್ತಿರ, ಮಸೀದಿ ಪಕ್ಕ, ಚಿತ್ರದುರ್ಗ ಕಚೇರಿ ದೂರವಾಣಿ ಸಂಖ್ಯೆ 08194-221426ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿ: ಈಶ್ವರ ಖಂಡ್ರೆ.!