LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೀಡಾ ಸಮಿತಿಯಿಂದ ಕ್ರೀಡಾ ಪ್ರಾಧಿಕಾರ ಆದರೂ ಕಾಣದ ಪ್ರಗತಿ: ಅಧಿಕಾರಿಗಳಿಗೆ  ಸಿ.ಎಂ ಪ್ರಶ್ನೆ

ಬೆಂಗಳೂರು  : ಕ್ರೀಡಾ ಸಮಿತಿಯಿಂದ ಕ್ರೀಡಾ ಪ್ರಾಧಿಕಾರ ಆದರೂ ಕಾಣದ ಪ್ರಗತಿ: ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ತೀವ್ರವಾಗಿ ಪ್ರಶ್ನಿಸಿದರು.‌

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ತರಾಟೆಗೆ ತೆಗೆದುಕೊಂಡರು. ಪ್ರಾಧಿಕಾರ ಮಾಡಿದ ಉದ್ದೇಶವೇ ಈಡೇರದಿದ್ದರೆ ಇದನ್ನು ಮಾಡಿ ಪ್ರಯೋಜನವೇನು ಎಂದು ಪ್ರಶ್ನಿಸಿದ ಸಿಎಂ, ನಿಗಧಿತವಾಗಿ ಪ್ರಾಧಿಕಾರದ ಸಭೆಗಳನ್ನು ನಡೆಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ ಕಾರ್ಯ ಚಟುವಟಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಅದಕ್ಕಿಂತ ಉತ್ತಮ ರೀತಿಯಲ್ಲಿ ನಮ್ಮ ಮಿತಿಯೊಳಗೆ ಕ್ರೀಡಾ ಕಾರ್ಯ ಚಟುವಟಿಕೆಗಳನ್ನು ನಡೆಸುವ ಬಗ್ಗೆ ಕ್ರಮ ವಹಿಸಲು ಸೂಚಿಸಿದರು. ಮುಂದಿನ ಐದಾರು ತಿಂಗಳಲ್ಲಿ , ದಸರಾ ಕ್ರೀಡಾಕೂಟ ಆರಂಭವಾಗುವುದರೊಳಗೆ ಪ್ರಾಧಿಕಾರ ಕ್ರಿಯಾಶೀಲ ಆಗಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.

ಎಲ್ಲಾ ಜಿಲ್ಲೆಗಳಲ್ಲೂ ಉಪ ನಿರ್ದೇಶಕರು ಇರಲೇ ಬೇಕು: ಸಿಎಂ ಖಡಕ್ ಸೂಚನೆ


ಆರ್ಥಿಕ ಇಲಾಖೆ ಒಪ್ಪಿಗೆ ಕೊಟ್ಟರೂ ಅಗತ್ಯ ತರಬೇತುದಾರರ ನೇಮಕಾತಿ ಆಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

176 ತರಬೇತುದಾರರ ನೇಮಕಾತಿಗೆ ನಾನೇ ಸೂಚಿಸಿ ಒಂದು ವರ್ಷ ಆಗಿದೆ. ಆದರೂ ನೇಮಕಾತಿ ಪ್ರಕ್ರಿಯೆ ಚುರುಕು ಆಗದಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಪ್ರತೀ ಜಿಲ್ಲೆಯಲ್ಲೂ ಉಪ ನಿರ್ದೇಶಕರು ಕಡ್ಡಾಯವಾಗಿ ಇರಬೇಕು ಎನ್ನುವ ಸೂಚನೆ ನೀಡಿದರು.

ಪ್ರತೀ ವರ್ಷ ಪ್ರಾಧಿಕಾರದ ಸಭೆ, ಪ್ರತೀ ವರ್ಷ ಆಡಿಟ್ ಆಗಬೇಕು. ಪ್ರತೀ ವರ್ಷ ನೇಮಕಾತಿ ನಡೆಯಬೇಕು. ತಪ್ಪಿದರೆ ಸಹಿಸಲ್ಲ ಎನ್ನುವ ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಕ್ರೀಡಾಕೂಟ ಸಂಘಟಿಸಲು ಅನುಧಾನ ನಿಗಧಿ ಪಡಿಸಲು ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟ ಸಂಘಟಿಸುವ ಮೊದಲು ಕನಿಷ್ಠ 15 ರಾಷ್ಟ್ರಗಳು ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು. ಇದಕ್ಕೆ ಸರಿಯಾದ ಗೈಡ್ ಲೈನ್ಸ್ ಗಳನ್ನು ಸಿದ್ಧಪಡಿಸಿ ಎನ್ನುವ ಸೂಚನೆ ನೀಡಿದರು.

ಕೇವಲ ಲೆಟರ್ ಹೆಡ್ ಗಳಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟ ಎಂದು ಬರುವ ಸಂಸ್ಥೆಗಳಿಗೆ ಕಡಿವಾಣ ಹಾಕಿ ಪ್ರಾಮಾಣಿಕವಾಗಿ ಕ್ರೀಡಾಕೂಟ ನಡೆಸುವವರಿಗೆ ಪ್ರೋತ್ಸಾಹ ನೀಡಬೇಕು ಎನ್ನುವ ಸೂಚನೆ ನೀಡಿದರು.ಕಂಬಳವನ್ನು ಗ್ರಾಮೀಣ ಕ್ರೀಡೆ ಎಂದು ಮಾನ್ಯತೆ ನೀಡಿ ಪ್ರೋತ್ಸಾಹ ನೀಡುವ ಬಗ್ಗೆ ಚರ್ಚಿಸಲಾಯಿತು.

ಕ್ರೀಡಾಪಟುಗಳಿಗೆ ಅಗತ್ಯವಾದಷ್ಟು ಪೌಷ್ಠಿಕಾಂಶ ಮತ್ತು ಪ್ರೋಟೀನ್ ಯುಕ್ತ ಆಹಾರ ಕೊಡಬೇಕು


ಕ್ರೀಡಾಕೂಟಗಳಿಗೆ ಅನುದಾನ ನೀಡುವುದು ಆನ್ ಲೈನ್ ನಲ್ಲಿ ದಾಖಲಾಗಬೇಕು. ಕ್ರೀಡಾಕೂಟ ಮುಗಿದ ಬರುವವರಿಗೆ ಅವಕಾಶ ಇರಬಾರದು ಎನ್ನುವ ಬಗ್ಗೆ ಚರ್ಚಿಸಲಾಯಿತು. ಕಂಠೀರವ ಕ್ರೀಡಾಂಗಣ ಹವಾ ನಿಯಂತ್ರಿತ ವ್ಯವಸ್ಥೆ ಶೀರ್ಘ್ರದಲ್ಲಿ ಜಾರಿಗೊಳಿಸುವಂತೆ ಸೂಚನೆ ನೀಡಿದರು.

ಕಂಠೀರವ ಕ್ರೀಡಾಂಗಣ ನಿರ್ಮಾಣವಾಗಿ 29 ವರ್ಷಗಳಾಗಿರುವುದರಿಂದ ಪ್ರೇಕ್ಷಕರ ಸುರಕ್ಷತೆಗೆ ಗ್ಯಾಲರಿಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಯಿತು. ಕಂಠೀರವ ಕ್ರೀಡಾಂಗಣದ ಜಿಮ್, ಶೌಚಾಲಯ, ಟ್ರಾಕ್ ಗಳ ದುರಸ್ತಿಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು.

ಕ್ರೀಡಾಪಟುಗಳಿಗೆ ಅಗತ್ಯವಾದಷ್ಟು ಪೌಷ್ಠಿಕಾಂಶ ಮತ್ತು ಪ್ರೋಟೀನ್ ಯುಕ್ತ ಆಹಾರ ಕೊಡಬೇಕು. ಪದೇ ಪದೇ ಪರಿಶೀಲನೆ ನಡೆಸಿ, ಲೋಪ ಕಂಡರೆ ವಾರ್ಡನ್ ಗಳ ವಿರುದ್ಧ ಕ್ರಮ ಕೈಗೊಂಡು ವರದಿ ನೀಡುವಂತೆ , ಕ್ರೀಡಾ ಹಾಸ್ಟೆಲ್ ಗಳಿಗೆ surprise visit ಮಾಡಿ , ಅಲ್ಲೇ ಊಟ ಮಾಡಿ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿ ವರದಿ ನೀಡಲು ಸಿಎಂ ಸೂಚನೆ ನೀಡಿದರು.

ಆನ್ ಲೈನ್ ಬಂದ DCM


ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನೆ ನಡೆಯುವ ವೇಳೆ ಚನ್ನಪಟ್ಟಣದಿಂದ ಆನ್ ಲೈನ್ ಮೂಲಕ ವಿಡಿಯೊ ಕಾನ್ಪರೆನ್ಸ್ ಗೆ ಬಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚನ್ನಪಟ್ಟಣ ಕ್ರೀಡಾಂಗಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು. ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಅಗತ್ಯ ಕ್ರಮಕ್ಕಾಗಿ ಸೂಚಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ