Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಖಾನಾಪುರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶಾಸಕ ವಿಠ್ಠಲ ಹಲಗೇಕರ ಅವರಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ

ಬೆಳಗಾವಿ: ಖಾನಾಪುರ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಸಾರ್ವಜನಿಕರ ದೀರ್ಘಕಾಲದ ಸಮಸ್ಯೆಗಳ ಪರಿಹಾರಕ್ಕಾಗಿ ಶಾಸಕ ವಿಠ್ಠಲರಾವ್ ಹಲಗೇಕರ ಅವರು ಬೆಳಗಾವಿಯಲ್ಲಿ ಮುಖ್ಯಮಂತ್ರಿ  ಡಿ. ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಸಲ್ಲಿಸಿದರು.

ಪ್ರಮುಖ ಬೇಡಿಕೆಗಳು ಮತ್ತು ಅನುದಾನ:
100 ಕೋಟಿ ರೂ. ಮೊತ್ತದ ನೀರಾವರಿ ಮತ್ತು ಬ್ಯಾರೇಜ್ ಕಾಮಗಾರಿಗಳು:
ಪಾರಿಶ್ವಾಡ-ಅವರೋಳಿ ಗ್ರಾಮಗಳ ಬಳಿ ನೀರು ಸರಬರಾಜು ಯೋಜನೆ – 50 ಕೋಟಿ ರೂ.
 ಜಳಗಾ ಗ್ರಾಮದ ಬಳಿ ನೀರು ಸರಬರಾಜು ಯೋಜನೆ – 15 ಕೋಟಿ ರೂ. ಶೇಡೇಗಾಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಬ್ಯಾರೇಜ್ ನಿರ್ಮಾಣ 15 ಕೋಟಿ ರೂ., ನಿಲಾವಡೆ ಗ್ರಾಮದ ಬಳಿ ಮಲಪ್ರಭಾ ನದಿಗೆ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣ –10 ಕೋಟಿ ರೂ., ತೋರಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಬ್ಯಾರೇಜ್ ನಿರ್ಮಾಣ 10 ಕೋಟಿ ರೂ.,
 ಭೂಗತ ವಿದ್ಯುತ್ ವಿತರಣಾ ವ್ಯವಸ್ಥೆ (UG Cable):
 ಖಾನಾಪುರ ತಾಲೂಕು ಅರಣ್ಯ ಪ್ರದೇಶ ಹಾಗೂ ಅತಿ ಹೆಚ್ಚು ಮಳೆ ಬೀಳುವ ಪ್ರದೇಶವಾಗಿರುವುದರಿಂದ ಪ್ರತಿ ವರ್ಷ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ. ಇದಕ್ಕೆ ಶಾಶ್ವತ ಪರಿಹಾರವಾಗಿ ಓವರ್‌ಹೆಡ್ ಲೈನ್‌ಗಳ ಬದಲಾಗಿ ಭೂಗತ ಕೇಬಲ್ (Underground Cable) ಅಳವಡಿಸಬೇಕು.
ಬೈಲೂರು  ಮತ್ತು ಕಣಕುಂಬಿ ಗ್ರಾಮಗಳಲ್ಲಿ ಹೊಸ ವಿದ್ಯುತ್ ಉಪಕೇಂದ್ರಗಳನ್ನು (Substations) ಸ್ಥಾಪಿಸಬೇಕು.
ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳು (PHC):
 ಅಪಘಾತ ಪೀಡಿತ ಪ್ರದೇಶ ಹಾಗೂ ದುರ್ಗಮ ಭೌಗೋಳಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಾಂಬೋಟಿ ಮತ್ತು ಕುಂಭಾಡ ಗ್ರಾಮಗಳಲ್ಲಿ ತಕ್ಷಣವೇ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಬೇಕು.

ಮುಖ್ಯಮಂತ್ರಿಗಳ ಭರವಸೆ:
> ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ  ಡಿ. ಕೆ. ಶಿವಕುಮಾರ್ ಅವರು, ಖಾನಾಪುರ ತಾಲೂಕಿನ ಅಭಿವೃದ್ಧಿಗೆ ಅಗತ್ಯವಿರುವ ಧನಸಹಾಯ ಹಾಗೂ ಅನುಮೋದನೆ ನೀಡುವುದಾಗಿ ಭರವಸೆ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ