LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

‘ಖುಷಿ’ ಸಿನಿಮಾ ಸಕಸ್ಸ್‌: 1 ಕೋಟಿ ರೂ. ದಾನ ಮಾಡಿ ಸಂಭ್ರಮಿಸಿದ ವಿಜಯ್ ದೇವರಕೊಂಡ

ಮುಂಬೈ:ವಿಜಯ್ ದೇವರಕೊಂಡ , ಸಮಂತಾ ರುತ್ ಪ್ರಭು ಅಭಿನಯದ ‘ಖುಷಿ’ ಸಿನಿಮಾ ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಿದೆ. ಸಿನಿಮಾ 4ನೇ ದಿನಕ್ಕೆ 75 ಕೋಟಿ ರೂಪಾಯಿ ಬಾಚಿಕೊಂಡಿದೆ. ಸತತ ಸೋಲು ಕಾಣುತ್ತಿದ್ದ ವಿಜಯ್ ಈ ಸಿನಿಮಾದಿಂದ ಗೆಲುವಿನ ನಗೆ ಬೀರಿದ್ದಾರೆ. ಇದರ ಬೆನ್ನಲೇ ಖುಷಿ ವಿಚಾರವೊಂದನ್ನು ದೇವರಕೊಂಡ ಹಂಚಿಕೊಂಡಿದ್ದಾರೆ.

ಖುಷಿ’ ಸಿನಿಮಾದ ಯಶಸ್ಸಿನಿಂದ ಫುಲ್ ಖುಷ್ ಆದ ವಿಜಯ ದೇವರಕೊಂಡ ಒಂದು ಕೋಟಿ ರೂಪಾಯಿ ದಾನ ಮಾಡುವುದಾಗಿ ಹೇಳಿದ್ದಾರೆ. ಈ ಸಿನಿಮಾದ ಸಂಭಾವನೆಯಲ್ಲಿ ಒಂದು ಕೋಟಿ ರೂಪಾಯಿ ಹಣವನ್ನು ದಾನ ಮಾಡುತ್ತೇನೆ ಎಂದಿದ್ದಾರೆ.
100 ಕುಟುಂಬಗಳಿಗೆ ತಲಾ ಒಂದು ಲಕ್ಷ ರೂಪಾಯಿ ಚೆಕ್ ನೀಡುವುದಾಗಿ ಘೋಷಿಸಿದ್ದಾರೆ. ಸೋಮವಾರ ವಿಶಾಖಪಟ್ಟಣಂನಲ್ಲಿ ನಡೆದ ಸಿನಿಮಾದ ಸಕ್ಸಸ್ ಮೀಟ್​​ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ವಿಜಯ್ ದೇವರಕೊಂಡ ಈ ಕುರಿತು ಮಾತನಾಡಿದ್ದು, ಈ ಖುಷಿಯನ್ನು ಹೆಚ್ಚಿಸಲು ನಾನು ‘ಖುಷಿ’ ಸಿನಿಮಾದ ಸಂಭಾವನೆಯಲ್ಲಿ ಒಂದು ಕೋಟಿ ರೂಪಾಯಿಯನ್ನು ಅಗತ್ಯವಿರುವ ಕುಟುಂಬಗಳಿಗೆ ನೀಡುತ್ತೇನೆ. ಮುಂದಿನ ಹತ್ತು ದಿನಗಳಲ್ಲಿ ಈ ಕೆಲಸವನ್ನು ಪೂರ್ಣಗೊಳಿಸುತ್ತೇನೆ. ನನ್ನ ಯಶಸ್ಸು, ನನ್ನ ಸಂತೋಷ, ನನ್ನ ಸಂಬಳವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ’ ಎಂದಿದ್ದಾರೆ.

‘ಸ್ಪ್ರೆಡ್ಡಿಂಗ್ ಖುಷಿ ಅಥವಾ ದೇವರ ಫ್ಯಾಮಿಲಿ ಎಂಬ ಹೆಸರಿನಲ್ಲಿ ಬುಧವಾರ ಇನ್​ಸ್ಟಾಗ್ರಾಂ ಮೂಲಕ ಫಾರ್ಮ್ ಹಂಚಿಕೊಳ್ಳುತ್ತೇನೆ. ಇದರ ಮೂಲಕ ಅಗತ್ಯವಿರುವವರು ನಿಮ್ಮ ಹೆಸರನ್ನು ನಮೂದಿಸಬಹುದು. ಮನೆ ಬಾಡಿಗೆ, ಮಕ್ಕಳ ಶಾಲಾ ಫೀಸ್ ಹೀಗೆ ಯಾವುದೇ ವಿಷಯಕ್ಕೆ ಹಣ ಬಳಕೆಯಾದರೂ ನನಗೆ ಸಂತೋಷವಾಗುತ್ತದೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!'2024 ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ' - ಮುಖ್ಯಮಂತ್ರಿ ಸಿದ್ದರಾಮಯ್ಯ