LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗಣಪತಿ ಮೆರವಣಿಗೆ ಮತ್ತು ವಿಸರ್ಜನೆ ವೇಳೆ ಪಾಲಿಸಬೇಕಾದ ಸುರಕ್ಷತಾ ಗೈಡ್‌ಲೈನ್ಸ್‌ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.

ಸುರಕ್ಷತಾ ಕ್ರಮಗಳು

* ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ.

* ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ.

* ಸೀರಿಯಲ್‌ ಲೈಟ್‌, ದೀಪಗಳನ್ನು ಹಾಕುವಾಗ ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯದಿರಿ.

* ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟದಿರಿ.

* ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ, ವಿದ್ಯುತ್‌ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ ತನ್ನಿ, ಅವರು ಅಗತ್ಯ ನೆರವು ಒದಗಿಸುವರು. •ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ.

* ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ “ಡೇಂಜರ್ ಜೋನ್” ಎಂದು ಸೂಚಿಸಬೇಕು. ಸಂಪರ್ಕ ಮಾಹಿತಿ

* ತಾತ್ಕಲಿಕ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವಾಗ, ಎಲ್ಲಾ ಸಂಬಂಧಿತ (ಬಿಬಿಎಂಪಿ/ಬಿಡಿಎ/ಗ್ರಾಮ ಪಂಚಾಯಿತಿ/ಆರಕ್ಷಕ ಠಾಣೆ ಹಾಗೂ ಇನ್ನಿತರ) ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿರಬೇಕು.

* ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಥವಾ ಸಹಾಯಕ ಇಂಜಿನಿಯರ್‌ಗಳು ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲು ನಿರ್ಮಾಣ ಮಾಡಿರುವ ಪೆಂಡಾಲ್ ಅಥವಾ ಸಮಾರಂಭ ಸ್ಥಳದ ಸುರಕ್ಷತೆಯನ್ನು ಖಾತ್ರಿ ಪಡಿಸುತ್ತಾರೆ.

* ವೈರಿಂಗ್ ಸುರಕ್ಷತೆ, ಎಂ.ಸಿ.ಬಿ ಮತ್ತು ಇಐಎ ಅಳವಡಿಕೆಯ ಬಗ್ಗೆ ನೋಂದಾಯಿತ ವಿದ್ಯುತ್ ಗುತ್ತಿಗೆದಾರರಿಂದ ವೈರಿಂಗ್ ಸಮಾಪನ ವರದಿಯನ್ನು ಪಡೆದು ಸ್ಥಳ ಪರಿಶೀಲಿಸಿದ ನಂತರ ಸಂಪರ್ಕ ಕಲ್ಪಿಸಲಾಗುವುದು.

* ತಾತ್ಕಾಲಿಕ ವಿದ್ಯುತ್ ಸಂಪರ್ಕದ ನಿರೀಕ್ಷಿತ ಸಮಯ ಮುಗಿದ ಬಳಿಕ ಅಂತಿಮ ರೀಡಿಂಗ್ ನಮೂದಿಸಿ ಮಾಪಕ ವಾಪಸ್ ನೀಡಬೇಕು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸ್ಪತ್ರೆಯ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ, ಹಿಡಿಯಲು ಹೋದವರ ಮೇಲೆ ಗುಂಡಿನ ದಾಳಿಎಟಿಎಂಗಳಲ್ಲಿ ದಿನದ 24 ಗಂಟೆ ಸೆಕ್ಯೂರಿಟಿ ಗಾರ್ಡ್‌ಗಳ ಅಗತ್ಯವಿಲ್ಲ- ಸುಪ್ರೀಂ ಕೋರ್ಟ್SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲುಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪ