LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೃಹಲಕ್ಷ್ಮಿ ಪೂರ್ಣ ಪ್ರಮಾಣದಲ್ಲಿ ಜಾರಿಯಾಗುವವರೆಗೆ ಅಧಿಕಾರಿಗಳು ನಿಗಾ ವಹಿಸಿ

ಬೆಂಗಳೂರು: ಇಲಾಖೆಯ ಯೋಜನೆಗಳನ್ನು ತಪ್ಪದೇ ಅನುಷ್ಠಾನಕ್ಕೆ ತರಬೇಕು. ಇಲಾಖೆಯಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಎಚ್ಚರವಹಿಸಿ ಕಾರ್ಯನಿರ್ವಹಿಸಬೇಕು. ಗೃಹಲಕ್ಷ್ಮಿ ಯೋಜನೆ ಪೂರ್ಣ ಪ್ರಮಾಣದಲ್ಲಿ ಜಾರಿ‌ ಆಗುವವರೆಗೂ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸೂಚಿಸಿದರು.

ಬೆಂಗಳೂರಿನ ಬಾಲಭವನದ ಆಡಿಟೋರಿಯಂನಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರೊಂದಿಗೆ ಇಲಾಖೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲಾ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿ ಸಂಬಂಧ ಈಗಾಗಲೇ ಬೌತಿಕವಾಗಿ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಇರುವುದನ್ನು ಅನುಷ್ಠಾನಗೊಳಿಸಲು ಸಚಿವರು ಸೂಚಿಸಿದರು. ಅಂಗನವಾಡಿ ಫಲಾನುಭವಿಗಳಾದ ಗರ್ಭಿಣಿ ಮತ್ತು ಬಾಣಂತಿಯರಿಗೆ ನೀಡುತ್ತಿರುವ ಮಾತೃಪೂರ್ಣ ಯೋಜನೆಯ ಸೌಲಭ್ಯವನ್ನು ಅವರ ಮನೆಗಳಿಗೆ ತಲುಪಲು (THR) ಕ್ರಮವಹಿಸಿ‌, ಅದರ ಸಾಧಕ ಬಾದಕಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎಂ.ಎಸ್‌.ಅರ್ಚನಾ, ಜಂಟಿ ನಿರ್ದೇಶಕರಾದ ಡಾ‌.ಉಷಾ, ಪುಷ್ಪಾ ರಾಯರ್, ಗೀತಾ ಪಾಟೀಲ್ ಸೇರಿದಂತೆ ಕೇಂದ್ರ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ ಅನುಷ್ಠಾನಕ್ಕೆ ಸಹಕರಿಸಿದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರಿಗೆ ಸಚಿವರು ಧನ್ಯವಾದ ಸಲ್ಲಿಸಿದರು. ಜೊತೆಗೆ ಗೃಹಲಕ್ಷ್ಮಿ ಯೋಜನೆ ಪೂರ್ಣ ಪ್ರಮಾಣದಲ್ಲಿ ಜಾರಿ‌ ಆಗುವವರೆಗೂ ಅಧಿಕಾರಿಗಳು ನಿಗಾವಹಿಸಬೇಕೆಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2024 ಜನವರಿ ಸಿಂಹ ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ ಹಣಕಾಸಿನ ವಿಚಾರದಲ್ಲಿ ಚಮತ್ಕಾರವೇ ನಡೆಯುತ್ತದೆ!----ಸಿದ್ಧರಾಮೇಶ್ವರ ಅವರ ವಚನ …!ಪಾಕಿಸ್ತಾನದ 'ಭಯೋತ್ಪಾದನೆ' ಆಟಕ್ಕೆ ಭಾರತ ಅವಕಾಶ ನೀಡುವುದಿಲ್ಲ’- ಎಸ್.ಜೈಶಂಕರ್ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಿಸಲಿ - ಸಿಎಂ ಸಿದ್ದರಾಮಯ್ಯಹಸಮಣೆ ಏರಲು ಸಜ್ಜಾದ 'ಗಿಲ್ಲಿ’ ನಟಿ ರಾಕುಲ್​ ಪ್ರೀತ್​ ಸಿಂಗ್ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆ