ಗೃಹ ಲಕ್ಷ್ಮಿ ಯೋಜನೆ ಹಣ ಸದ್ಯದಲ್ಲಿಯೇ ಖಾತೆಗೆ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಗೃಹ ಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ 10 ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಹಣ ಮೂರ್ನಾಲ್ಕು ತಿಂಗಳಿನಿಂದ ಬರುತ್ತಿಲ್ಲ ಎನ್ನುವುದು ತಪ್ಪು, ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಹಾಕಿದ್ದೇವೆ. ಜೂನ್, ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಹಾಕಲು ತಾಂತ್ರಿಕ ದೋಷವಾಗಿದ್ದು, ಈಗಾಗಲೇ ಡಿಬಿಟಿ ಪುಶ್ ಮಾಡುತ್ತಿದ್ದೇವೆ. 8-10 ದಿನದೊಳಗೆ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ
ಈ ಯೋಜನೆಯನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ಕೊಡಲಾಗುತ್ತಿದೆ. ಚುನಾವಣೆ ಪೂರ್ಣದಲ್ಲೇ ರಾಜ್ಯದ ಮಹಿಳೆಯರಿಗೆ ಈ ಭರವಸೆ ನೀಡಲಾಗಿತ್ತು. ಹಾಗಾಗಿ ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.