LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೋವರ್ಧನ ಪೂಜೆ ಮತ್ತು ದೀಪಾವಳಿ ಹಬ್ಬದ ವಿಶೇಷ ಆಚರಣೆ

ಬೆಂಗಳೂರು : ವ್ರಜವಾಸಿಗಳನ್ನು ರಕ್ಷಿಸಲು ಶ್ರೀ ಕೃಷ್ಣನು ಗೋವರ್ಧನ ಬೆಟ್ಟವನ್ನು ಎತ್ತಿದ ದಿವ್ಯಲೀಲೆಯ ಸ್ಮರಣಾರ್ಥವಾಗಿ ಕಾರ್ತಿಕ ಮಾಸದಲ್ಲಿ ಗೋವರ್ಧನ ಪೂಜೆಯನ್ನು ಆಚರಿಸಲಾಗುತ್ತದೆ.

5000 ವರ್ಷಗಳ ಹಿಂದೆ ಶ್ರೀ ಕೃಷ್ಣನ ಅವತಾರದ ಕಾಲದಲ್ಲಿ ನಂದ ಮಹಾರಾಜರ ನೇತೃತ್ವದಲ್ಲಿ ವ್ರಜವಾಸಿಗಳು ಇಂದ್ರಯಜ್ಞಕ್ಕೆ ಸಿದ್ಧರಾಗುತ್ತಿರುವುದನ್ನು ನೋಡಿದ ಶ್ರೀಕೃಷ್ಣನು ಇಂದ್ರನ ಪೂಜೆಯನ್ನು ಬಿಟ್ಟು ಗೋವರ್ಧನ ಗಿರಿಯನ್ನು ಪೂಜಿಸುವಂತೆ ಸೂಚಿಸಿದನು. ಇದನ್ನು ತಿಳಿದ ಇಂದ್ರನು ಕೋಪಗೊಂಡು ವ್ರಜಭೂಮಿಯ ಮೇಲೆ ಪ್ರಳಯಕಾಲದ ಸಂವರ್ತಕ ಮೋಡಗಳ ಮೂಲಕ ಧಾರಾಕಾರವಾದ ಮಳೆಯನ್ನು ಸುರಿಸಲಾರಂಭಿಸಿದನು. ಆಗ ಕೂಡಲೇ ಗೋವರ್ಧನ ಗಿರಿಯನ್ನು ಶ್ರೀ ಕೃಷ್ಣ ತನ್ನ ಎಡಗೈಯ ಕಿರುಬೆರಳಿನ ಮೇಲೆತ್ತಿಕೊಂಡು, ಬೆಟ್ಟದ ಕೆಳಗೆ ಎಲ್ಲಾ ವ್ರಜವಾಸಿಗಳಿಗೆ ಆಶ್ರಯವನ್ನು ನೀಡಿದನು.

ಆನಂತರ ಇಂದ್ರನು ತನ್ನ ಅಪರಾಧವನ್ನು ಅರಿತು ಶ್ರೀ ಕೃಷ್ಣನಲ್ಲಿ ಕ್ಷಮೆಯಾಚಿಸಿ ಪ್ರಾರ್ಥಿಸುತ್ತಾನೆ. ಹೀಗೆ ಶ್ರೀ ಕೃಷ್ಣನ ಭಕ್ತರು ಬೇರೆ ಯಾವುದೇ ದೇವತೆಗಳನ್ನು ಆರಾಧಿಸಬೇಕಾಗಿಲ್ಲ ಎಂದು ಶ್ರೀ ಕೃಷ್ಣ ಪರಮಾತ್ಮನು ತನ್ನ ಈ ಗೋವರ್ಧನ ಲೀಲೆಯ ಮೂಲಕ ತಿಳಿಸಿದನು.

ಗೋವರ್ಧನ ಪೂಜೆಯ ಪಾವನ ಪರ್ವದಂದು ಇಸ್ಕಾನ್ ಬೆಂಗಳೂರಿನಲ್ಲಿ ಭಕ್ತರು ಗೋವರ್ಧನ ಗಿರಿಯ ಪ್ರತಿರೂಪವೊಂದನ್ನು ನಿರ್ಮಿಸಿ ಅದರ ಸುತ್ತ ವಿವಿಧ ಖಾದ್ಯ ತಿನಿಸುಗಳನ್ನು ಜೋಡಿಸಿ ಭಗವಂತನಿಗೆ ಅರ್ಪಿಸಿದರು. ಆನಂತರ ಎಲ್ಲಾ ಭಕ್ತರಿಗೆ ಭಗವಂತನಿಗೆ ಅರ್ಪಿಸಿದ ವಿವಿಧ ಭೋಜ್ಯಗಳನ್ನುನೆರೆದಿರುವ ಭಕ್ತಾದಿಗಳಿಗೆ ವಿತರಿಸಲಾಯಿತು. ಗೋವುಗಳನ್ನು ಅಲಂಕರಿಸಿ, ಗೋವುಗಳ ರಕ್ಷಕ ಗೋಪಾಲನಿಗೆ ಆರತಿ ಮಾಡಲಾಯಿತು.

ಗೋವುಗಳನ್ನು ಮುಂದಿಟ್ಟುಕೊಂಡು ಭಕ್ತರು ಗೋವರ್ಧನ ಗಿರಿಗೆ ಪ್ರದಕ್ಷಿಣೆ ಮಾಡಿದರು. ಭಕ್ತರು ‘ಶ್ರೀ ಗೋವರ್ಧನಾಷ್ಟಕಂ’, 'ಯಶೋಮತಿ ನಂದನ’ದಂತಹ ವಿವಿಧ ಹಾಡುಗಳನ್ನು ಹಾಡುತ್ತಾ ಕೃಷ್ಣ ಬಲರಾಮನಿಗೆ ಭವ್ಯ ಆರತಿ ಮಾಡಲಾಯಿತು. ಹಾಗೆಯೇ ‘ದಾಮೋದರಷ್ಟಕ’ ಭಜನೆಯ ಜೊತೆಗೆ ದೀಪೋತ್ಸವ ಆಚರೆಣೆ ನಡಯಿತು. ಶಯನ ಪಲ್ಲಕ್ಕಿಯೊಂದಿಗೆ ಆಚರಣೆಯು ಪರಿಸಮಾಪ್ತಿಗೊಂಡಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ