LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಜಾಮೀನು ಮಂಜೂರು

ಮುಂಬೈ : ಹೋಟೆಲ್ ಉದ್ಯಮಿ ಜಯ್‌ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಜಾಮೀನು ಮಂಜೂರು ಮಾಡಲಾಗಿದೆ.

2001ರಲ್ಲಿ ಉದ್ಯಮಿ ಜಯ್‌ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಛೋಟಾ ರಾಜನ್ ಬಾಂಬೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಜಾಮೀನು ಮಂಜೂರು ಮಾಡಿ ಅಧೀನ ನ್ಯಾಯಾಲಯದ ಶಿಕ್ಷೆಯನ್ನು ರದ್ದುಪಡಿಸುವಂತೆ ಛೋಟಾ ರಾಜನ್ ಅರ್ಜಿ ಸಲ್ಲಿಸಿದ್ದ.

ಇದೀಗ ಛೋಟಾ ರಾಜನ್‌ಗೆ ಬಾಂಬೆ ಹೈಕೋರ್ಟ್​ನ ವಿಭಾಗೀಯ ಪೀಠವು ಜಾಮೀನು ಮಂಜೂರು ಮಾಡಿದೆ. ಜಾಮೀನಿಗಾಗಿ 1 ಲಕ್ಷ ರೂ. ಭದ್ರತಾ ಬಾಂಡ್ ನೀಡಲು ಆದೇಶಿಸಿದೆ. ಆದರೆ ಛೋಟಾ ರಾಜನ್ ಜೈಲಿನಿಂದ ಹೊರ ಬರಲು ಸಾಧ್ಯವಿಲ್ಲ. ಏಕೆಂದರೆ ಚೋಟಾ ರಾಜನ್ ಉಳಿದ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
3 ಪಾಕ್ ಭಯೋತ್ಪಾದಕರ ಪೋಸ್ಟರ್‌ ಬಿಡುಗಡೆ- ಮಾಹಿತಿ ನೀಡಿದವರಿಗೆ 20 ಲಕ್ಷ ರೂ.ಗಳ ಬಹುಮಾನಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ- ಮೂವರು ಉಗ್ರರ ಹತ್ಯೆಚದುರಂಗ ಆಟವನ್ನೇ ನಿಷೇಧಿಸಿದ ತಾಲಿಬಾನ್- ಕಾರಣವೇನು?ಮಸೀದಿಯಲ್ಲಿದ್ದ ಕುರಾನ್‌ ಕದ್ದೊಯ್ದು ಭಸ್ಮ, ಬೆಳಗಾವಿಯಲ್ಲಿ ಪ್ರತಿಭಟನೆ, ಉದ್ವಿಗ್ನ ವಾತಾವರಣಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ಆಂಧ್ರದಲ್ಲಿ ಸೈನಿಕರ ಆಸ್ತಿಗೆ ತೆರಿಗೆ ವಿನಾಯಿತಿ: ಪವನ್ ಕಲ್ಯಾಣ್ ಘೋಷಣೆ'ನ್ಯೂಕ್ಲಿಯರ್‌ ಬ್ಲ್ಯಾಕ್‌ಮೇಲ್‌ಗೆ ನಾವು ಬೆದರಲ್ಲ'- ಪಾಕ್‌ಗೆ ಮೋದಿ ಎಚ್ಚರಿಕೆಮತ್ತೆ ಪಾಕ್‌ನಿಂದ ಡ್ರೋನ್ ದಾಳಿಮಂಗಳೂರು :ಟಿಂಟೆಡ್‌ ಗ್ಲಾಸ್‌ ವಿರುದ್ಧ ಪೊಲೀಸರ ಕಾರ್ಯಾಚರಣೆ-504 ಕಾರುಗಳಿಗೆ ₹2.53 ಲಕ್ಷ ದಂಡಐಎಎಸ್ ಅಧಿಕಾರಿ ಮೇಧಾ ಆನಂದ್ ಅವರ ಸ್ಫೂರ್ತಿದಾಯಕ ಕಥೆ