LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಗ್ಯಾರಂಟಿಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ'- ಡಿಕೆಶಿ

ಬೆಂಗಳೂರು: ತೈಲ ಬೆಲೆ ಏರಿಕೆಗೂ ಗ್ಯಾರಂಟಿಗೂ ಸಂಬಂಧವಿಲ್ಲ. ಎಲ್ಲಾ ಗ್ಯಾರಂಟಿಗಳು ಮುಂದುವರಿಯುತ್ತವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಪರಿಶ್ರಮ ನೀಟ್ ಅಕಾಡೆಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ ಎಂದು ವಿಪಕ್ಷಗಳ ಹೇಳಿಕೆಗೆ ಯಾರು ಏನೇ ಹೇಳಿದರೂ ಬೆಲೆ ಏರಿಕೆಗೆ ಗ್ಯಾರಂಟಿ ಕಾರಣವಲ್ಲ. ಬೆಲೆ ಏರಿಕೆಯನ್ನು ಎಲ್ಲಾ ಸಂದರ್ಭದಲ್ಲಿ ಯಾವ ರೀತಿ ಮಾಡಬೇಕೋ ಆ ರೀತಿ ಮಾಡಿದ್ದೇವೆ. ಬಿಜೆಪಿ ಸರ್ಕಾರದಲ್ಲೂ ಬೆಲೆ ಏರಿಕೆ ಮಾಡಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡರು.

ತೈಲ ಬೆಲೆ ಕಡಿಮೆ ಇದ್ದರೂ ಅವರು ಬೆಲೆ ಏರಿಕೆ ಮಾಡಿದ್ರು. ನಾವು ಅದನ್ನು ಕಂಟ್ರೋಲ್‌ನಲ್ಲಿ ಇಟ್ಟುಕೊಂಡು ಪಕ್ಕದ ರಾಜ್ಯಗಳಿಗೆ ಬ್ಯುಸಿನೆಸ್ ಜಾಸ್ತಿ ಹೋಗುತ್ತಿತ್ತು. ಆ ದೃಷ್ಟಿಯಿಂದ ಪಕ್ಕದ ರಾಜ್ಯದಲ್ಲಿ ಬ್ಯುಸಿನೆಸ್ ಕಂಟ್ರೋಲ್ ಆಗಲಿ ಎಂದು ಮಾಡಿದ್ದೇವೆ.ಗ್ಯಾರಂಟಿಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ. ಎಲ್ಲಾ ಗ್ಯಾರಂಟಿಗಳು ಮುಂದುವರಿಯುತ್ತವೆ. ಅಭಿವೃದ್ಧಿ ಕೆಲಸಕ್ಕೆ ಏನು ಬೇಕೋ ಅದನ್ನು ಮಾಡುತ್ತೇವೆ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST