LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ತುಂಬಾ ಕಷ್ಟ ಆಗುತ್ತಿದೆ'- ಬಸವರಾಜ ರಾಯರೆಡ್ಡಿ

ಕೊಪ್ಪಳ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗೆ 60 ರಿಂದ 65 ಸಾವಿರ ಕೋಟಿ ಹಣ ಬೇಕು. ಇದರಿಂದ ಬೇರೆ ಯೋಜನೆಗಳಿಗೆ ಅನುದಾನ ಇಲ್ಲ.‌ ಯಾವಾಗಲೂ ಸಿಎಂ ಜೊತೆಗೆ ಇರುವ ನನಗೆ ಮಾತ್ರ ಒಳಗಿನ ಸಮಸ್ಯೆ ಗೊತ್ತಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಕೊಪ್ಪಳದ‌ದಲ್ಲಿ  ರೈತರು ಮತ್ತು ಗ್ರಾಮಸ್ಥರ ಸಭೆಯಲ್ಲಿ ಭಾಗಿಯಾಗಿ ಅವರು ಮಾತನಾಡಿ, ಹಣಕಾಸಿನ ಕೊರತೆಯಿಂದ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ನಾನು ಕೆರೆ ತುಂಬಿಸುವ ಯೋಜನೆಗೆ ಬರೋಬ್ಬರಿ 970 ಕೋಟಿ ರೂ. ಅನುದಾನ ತಂದಿದ್ದೇನೆ. ರಾಜ್ಯದ ಯಾವುದೇ ವಿಧಾನಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ.‌ ತುಂಬಾ ಕ್ಷೇತ್ರದ ಶಾಸಕರು ಅಭಿವೃದ್ಧಿಗೆ ಅನುದಾನ ಕೇಳುತ್ತಿದ್ದಾರೆ. ಆದರೆ, ಸಿಎಂ ಯಾರಿಗೂ ಅನುದಾನ ನೀಡಿಲ್ಲ ಎಂದು ಹೇಳಿದರು.

ನಮ್ಮ ಕ್ಷೇತ್ರಕ್ಕೆ ಮಾತ್ರ ಹಣ ಬಂದಿದೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ತುಂಬಾ ಕಷ್ಟ ಆಗುತ್ತಿದೆ. ಸಿಎಂ ನನ್ನನ್ನು ತಮ್ಮ ಆರ್ಥಿಕ ಸಲಹೆಗಾರನಾಗಿ ಮಾಡಿಕೊಂಡಿದ್ದಾರೆ. ದಿನನಿತ್ಯ ಅವರ ಜೊತೆಯಲ್ಲೇ ಇರುವುದರಿಂದ ನನ್ನ ಕ್ಷೇತ್ರಕ್ಕೆ ಮಾತ್ರ ಹಣ ಬಂದಿದೆ. ರಾಜ್ಯದಲ್ಲಿ ಇದು ಒಂದೇ ಕೆಲಸ ಆಗುತ್ತಿದೆ. ಹಣಕಾಸಿನ ಆಂತರಿಕ ವಿಚಾರ, ನನಗೆ ಮಾತ್ರ ಗೊತ್ತಿದೆ.‌ ಇದನ್ನು ಕ್ಷೇತ್ರದ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ'- ಬಿಆರ್ ಪಾಟೀಲ್ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯು