LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗ್ರಾ.ಪಂ. ಸದಸ್ಯರು, ನೌಕರರಿಗೆ ಗುಡ್‌ ನ್ಯೂಸ್‌ | ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ನಿರ್ಧಾರ

ಬೆಂಗಳೂರು: ಗ್ರಾಮ ಪಂಚಾಯತ್‌ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಯ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚಿಸಬೇಕು ಎಂಬ ಶಾಸಕ ದಿನೇಶ್‌ ಗೂಳಿಗೌಡ ಅವರ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಮಂಡಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ.
ಗ್ರಾಮ ಪಂಚಾಯತ್‌ ಸದಸ್ಯರು, ನೌಕರರ ಸಮಸ್ಯೆ ಕುರಿತು ಶಾಸಕ ದಿನೇಶ್‌ ಗೂಳಿಗೌಡ ಸಿಎಂ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆಗೆ ಪತ್ರ ಬರೆದಿದ್ದರು. ಈಗ ಶಾಸಕರ ಪತ್ರಕ್ಕೆ ಮಾನ್ಯತೆ ನೀಡಿರುವ ಸಿದ್ದರಾಮಯ್ಯ ತಜ್ಞರ ಸಮಿತಿ ರಚನೆ ಸಂಬಂಧ ಪರಿಶೀಲಿಸಿ ಪ್ರಸ್ತಾವನೆ ಮಂಡಿಸಲು ಸೂಚಿಸುವ ಮೂಲಕ ಗ್ರಾ.ಪಂ. ಸದಸ್ಯರು ಹಾಗೂ ನೌಕರರಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಪಂಚಾಯಿತಿ ಒಕ್ಕೂಟಗಳ ಪದಾಧಿಕಾರಿಗಳ ಸಭೆ ನಡೆಸಿರುವ ಸಚಿವ ಪ್ರಿಯಾಂಕ್‌ ಖರ್ಗೆ, ಈ ಕುರಿತಂತೆ ತಜ್ಞರ ತಂಡ ರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಗ್ರಾಮ ಪಂಚಾಯತಿ ಸದಸ್ಯರು, ನೌಕರರ ಪರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಶಾಸಕ ದಿನೇಶ್‌ ಗೂಳಿಗೌಡ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ನಾಳೆ ಸದನದಲ್ಲಿ ರನ್ಯಾ ಕೇಸ್ ನಲ್ಲಿ ನಂಟಿರೋ ಇಬ್ಬರು ಸಚಿವರ ಹೆಸರನ್ನು ಹೇಳುವೆ'- ಯತ್ನಾಳ್ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಳ್ಳುವಲ್ಲಿ ಎಲ್ಲರೂ ಮುಂದಾಗಬೇಕು: ಡಾ.ಎಂ.ಚಂದ್ರಪ್ಪ.!ಮದುವೆ ಮಂಟಪದಲ್ಲಿ ಜಗಳ: ನನಗೆ ಈ ಮದುವೆ ಬೇಡವೇ ಬೇಡ ಎಂದು ನಿರಾಕರಿಸಿದ ವಧು100 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ವಾಹನ - 10 ಜನರಿಗೆ ಗಾಯರಿಯಾಸಿ ಬಸ್ ದಾಳಿಯ ಮಾಸ್ಟರ್ ಮೈಂಡ್, ಭಯೋತ್ಪಾದಕ ಅಬು ಕತಾಲ್ ಹತ್ಯೆಮುಸ್ಲಿಮರಿಗಾಗಿ ‘ಇಫ್ತಾರ್’ ಆಯೋಜಿಸಿದ ರಾಮನ ಭಕ್ತೆ ‘ಮೀನಾಕ್ಷಿ ಅಮ್ಮ’ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಯೆಮನ್‌ ಮೇಲೆ ಅಮೆರಿಕಾ ಭಯಾನಕ ದಾಳಿ; ಒಂದೊಂದು ದೃಶ್ಯವೂ ನರಕಹಿಂದೂ ಯುವತಿಯೊಂದಿಗೆ ಇದ್ದ ಮುಸ್ಲಿಂ ಯುವಕನ ಹಲ್ಲೆ ಪ್ರಕರಣ: ನ್ಯಾಯಾಲಯದ ತೀರ್ಪುಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ...! ಕರ್ನಾಟಕದ ಇತಿಹಾಸದಲ್ಲಿ ಅತೀ ದೊಡ್ಡ ಡ್ರಗ್ಸ್ ಜಾಲ ಪತ್ತೆ