LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚನ್ನಪಟ್ಟಣ ಬೈಎಲೆಕ್ಷನ್‌ಗೆ ನಿಖಿಲ್ ಸ್ಪರ್ಧೆ? ಹೆಚ್‌ಡಿಕೆ ಸ್ಪಷ್ಟನೆ

ರಾಮನಗರ: ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಬಗ್ಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಚನ್ನಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಿಖಿಲ್ ಎರಡು ಬಾರಿ ಸೋತು ಅವನು ಅನುಭವಿಸುತ್ತಿರುವ ನೋವು ಏನೆಂದು ನನಗೆ ಮಾತ್ರ ಗೊತ್ತು. ಹೀಗಾಗಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಅವನನ್ನು ಕಣಕ್ಕಿಳಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಚನ್ನಪಟ್ಟಣ ಬೈ ಎಲೆಕ್ಷನ್‌ಗೆ ಸಿ.ಪಿ.ಯೋಗೇಶ್ವರ್ ಆಗಬಹುದು. ಇಲ್ಲ ಜೆಡಿಎಸ್ ನವರೇ ಆಗಬಹುದು, ಎನ್ ಡಿಎ ಅಭ್ಯರ್ಥಿ ಯಾರೇ ಆದರೂ ನಾವು ಒಗ್ಗೂಡಿ ಕೆಲಸ ಮಾಡೋಣ ಎಂದು ಹೇಳಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ ಅವರ ಲೋಕಸಭಾ ಸ್ಪರ್ಧೆಯ ಕಾರಣದಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಯ ಬಗ್ಗೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಈ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿತ್ತು. ಇದೀಗ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಬಗ್ಗೆ ಸ್ವತಃ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದು, ಎಲ್ಲಾ ಗಾಳಿ ಸುದ್ದಿಗಳಿಗೆ ತೆರೆ ಎಳೆದಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!