LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಇತರ ಪ್ರಯಾಣಿಕರ ಮುಂದೆಯೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಚಾಲಕ.!

ಹೈದರಾಬಾದ್: ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಬಸ್‌ ಚಾಲಕನೇ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. 26 ವರ್ಷದ ಸಂತ್ರಸ್ತ ಮಹಿಳೆಯು ಖಾಸಗಿ ಸ್ಲೀಪರ್ ಬಸ್ಸಿನಲ್ಲಿ ತೆಲಂಗಾಣದ ನಿರ್ಮಲ್ ಜಿಲ್ಲೆಯಿಂದ ಆಂಧ್ರಪ್ರದೇಶದ ಪ್ರಕಾಶಂಗೆ ತೆರಳುತ್ತಿದ್ದರು. ಈ ವೇಳೆ ಬಸ್‌ ಚಾಲಕನೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಸೋಮವಾರ ಮಧ್ಯರಾತ್ರಿಯ ನಂತರ ಬಸ್ ಹೈದರಾಬಾದ್ ಹೊರವಲಯದಲ್ಲಿದ್ದಾಗ ಮಹಿಳೆ 'ಡಯಲ್ 100'ಗೆ ಕರೆ ಮಾಡಿ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಲರ್ಟ್ ಆದ ಪೊಲೀಸರು ಬಸ್‌ ತಡೆದು ಪರಿಶೀಲನೆ ನಡೆಸುತ್ತಿದ್ದಂತೆ ಮೆಟ್ಟುಗುಡಾ ಪ್ರದೇಶದ ಬಳಿ ಬಸ್‌ ನಿಧಾನವಾದಾಗ ಆರೋಪಿ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಸ್ಸಿನ ಚಾಲಕರಲ್ಲಿ ಒಬ್ಬನಾದ ಆರೋಪಿಯು ತನ್ನ ಬಾಯಿಗೆ ಕಂಬಳಿ ಇಟ್ಟು ಇತರ ಪ್ರಯಾಣಿಕರು ಇದ್ದರೂ ಚಲಿಸುತ್ತಿದ್ದ ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಇದೇ ವೇಳೆ ಬಸ್ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಆಕೆಯ ದೂರಿನ ಆಧಾರದ ಮೇಲೆ ಉಸ್ಮಾನಿಯಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!ಫೆ. 15 ರಂದು ವಸತಿ ಶಾಲೆಗಳ 06 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಈ ವಸ್ತುಗಳು ನಿಷೇಧ.!