LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿಕ್ಕಮಗಳೂರು – ಕಾರು ಮತ್ತು ಕೆಎಸ್ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿ – 9 ಮಂದಿ ಗಂಭೀರ ಗಾಯ

ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ನಡೆದಿದೆ.

ಕಾರಿನಲ್ಲಿದ್ದ 9 ಜನರು ಭದ್ರಾವತಿ ಮೂಲದವರು ಎಂದು ತಿಳಿದುಬಂದಿದೆ. ಕೆಎಸ್‌ಆರ್‌ಟಿಸಿ ಬಸ್ ಶಿವಮೊಗ್ಗದಿಂದ ತರೀಕೆರೆಗೆ ತೆರಳುತ್ತಿದ್ದು, ಕಾರು ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ ಉಂಟಾಗಿದೆ.

ಸರ್ಕಾರಿ ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST