LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿತ್ರರಂಗಕ್ಕೆ ಮತ್ತೊಂದು ಹೃದಯಾಘಾತದ ಶಾಕ್​: ಖ್ಯಾತ ನಿರ್ದೇಶಕ ಸಿದ್ಧಿಕಿ ಸ್ಥಿತಿ ಗಂಭೀರ

ಕೊಚ್ಚಿ: ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಮೃತಪಟ್ಟ ಬೆನ್ನಲ್ಲೇ ಭಾರತೀಯ ಚಿತ್ರರಂಗಕ್ಕೆ ಮತ್ತೊಂದು ಶಾಕಿಂಗ್​ ಸುದ್ದಿ ಕೇಳಿಬಂದಿದೆ. ಹೌದು. ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಸಿದ್ಧಿಕಿ ಅವರಿಗೆ ನಿನ್ನೆ (ಆಗಸ್ಟ್​ 07) ಹೃದಯಾಘಾತವಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಕೂಡಲೇ ಕೊಚ್ಚಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅನೇಕ ಗಮನಾರ್ಹ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಖ್ಯಾತಿ ಸಿದ್ಧಿಕಿ ಅವರಿಗೆ ಇದೆ. ಈಗ ಅವರಿಗೆ 69 ವರ್ಷ ವಯಸ್ಸಾಗಿದ್ದು, ಹೃದಯಾಘಾತದ ಬಳಿಕ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿ ಆಗಿದೆ. ಸಿದ್ಧಿಕಿ ಅವರು ನ್ಯುಮೋನಿಯಾ ಮತ್ತು ಲಿವರ್‌ಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಇದರ ನಡುವೆ ಹೃದಯಾಘಾತವಾಗಿರುವುದರಿಂದ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 1986ರಲ್ಲಿ ತೆರೆಕಂಡ 'ಪಪ್ಪನ್ ಪ್ರಿಯಪ್ಪೆತ್ತ ಪಪ್ಪನ್' ಸಿನಿಮಾಗೆ ಚಿತ್ರಕತೆ ಬರೆಯುವುದರೊಂದಿಗೆ ಸಿನಿ ಪಯಣ ಆರಂಭಿಸಿದ ಸಿದ್ಧಿಕಿ, 1989ರಲ್ಲಿ ಬಿಡುಗಡೆಯಾದ 'ರಾಮ್‌ಜಿ ರಾವ್‌ ಸ್ಪೀಕಿಂಗ್‌' ಸಿನಿಮಾ ಮೂಲಕ ನಿರ್ದೇಶಕರಾದರು. ಅವರು ನಿರ್ದೇಶನ ಮಾಡಿರುವ ಕೊನೇ ಸಿನಿಮಾ 'ಬಿಗ್‌ ಬ್ರದರ್‌' 2020ರಲ್ಲಿ ಬಿಡುಗಡೆಯಾಗಿದೆ. ಮಲಯಾಳಂ ಮಾತ್ರವಲ್ಲದೆ ತಮಿಳು, ಹಿಂದಿಯಲ್ಲೂ ಸಿನಿಮಾ ನಿರ್ದೇಶಿಸಿದ ಖ್ಯಾತಿ ಅವರದ್ದು. ಮಲಯಾಳಂನ ‘ರಾಮ್​ಜಿ ರಾವ್​ ಸ್ಪೀಕಿಂಗ್​’, ‘ಇನ್​ ಹರಿಹರ್​ ನಗರ್​’, ‘ಗಾಡ್​ಫಾದರ್​’, ‘ವಿಯಾಟ್ನಾಂ ಕಾಲೋನಿ’, ‘ಕಾಬೂಲಿವಾಲಾ’ ಮುಂತಾದ ಸಿನಿಮಾಗಳಿಗೆ ಸಿದ್ಧಿಕಿ ನಿರ್ದೇಶನ ಮಾಡಿದ್ದಾರೆ. ಸಿದ್ಧಿಕಿ ಇಸ್ಮಾಯಿಲ್​ ಎಂಬುದು ಅವರ ಪೂರ್ಣ ಹೆಸರು. ನಿರ್ದೇಶನದ ಜೊತೆಗೆ ಕೆಲವು ಸಿನಿಮಾಗಳಲ್ಲಿ ಅವರು ಅತಿಥಿ ಪಾತ್ರ ಮಾಡುವ ಮೂಲಕವೂ ಪ್ರೇಕ್ಷಕರಿಗೆ ಪರಿಚಿತರಾಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!