LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿನ್ನಾಭರಣಗಳ ಕಳ್ಳತನ ಕಳುವು ಪ್ರಕರಣ ಆರೋಪಿಗಳ ಬಂಧನ

 

ಸಿರುಗುಪ್ಪ: ಸಿರಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಚೆಗೆ ನಡೆದ ದೇವಸ್ಥಾನದ ಚಿನ್ನಾಭರಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ತಾಲೂಕಿನ ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಾಪುರ ಗ್ರಾಮದ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಹಾಗೂ ಸಿರಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕರೂರು ಗ್ರಾಮದ ಶ್ರೀ ಸುಂಕಲಮ್ಮ ದೇವಸ್ಥಾನದಲ್ಲಿ ದೇವರ ವಿಗ್ರಹಗಳ ಮೇಲಿನ ಚಿನ್ನಾಭರಣಗಳ ಕಳ್ಳತನ ನಡೆದಿತ್ತು.

ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿತರಾದ ಚಾನಾಳ್ ಗ್ರಾಮದ ನಿವಾಸಿಗಳಾದ ಮಹಾಲಿಂಗ (48) ಹಾಗೂ ವೆಂಕಟೇಶ್ ಉರುಫ್ ಹಡ್ಲಿಗಿ ವೆಂಕಟೇಶ್ (47), ಇವರನ್ನು ಬಂಧಿಸಿ ಆರೋಪಿತರಿಂದ ರೂ.1.25 ಲಕ್ಷ ಬೆಲೆ ಬಾಳುವ ಬಂಗಾರ ಮತ್ತು ಬೆಳ್ಳಿ ಆಭರಣ ಪ್ರಕರಣದಲ್ಲಿ ಕೃತ್ಯಕ್ಕೆ ಬಳಸಿದ ರೂ.50 ಸಾವಿರ ಬೆಲೆ ಬಾಳುವ ದ್ವಿಚಕ್ರ ವಾಹನ ಜಪ್ತು ಮಾಡಿಕೊಂಡಿರುತ್ತಾರೆ.

ಮೈಲಾಪುರ ಗ್ರಾಮದ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಕಳುವಾದ ರೂ.98 ಸಾವಿರ ಮೌಲ್ಯದ ಬೆಳ್ಳಿ ಮತ್ತು ಬಂಗಾರದ ಆಭರಣಗಳನ್ನು ಆರೋಪಿತರಿಂದ ಪಡೆದಿದ್ದು, ನಗದು ಸೇರಿದಂತೆ ಒಟ್ಟು ರೂ. 2.83 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣವನ್ನು ಬಳ್ಳಾರಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ್ ಕುಮಾರ್, ಬಳ್ಳಾರಿ ಹಾಗೂ ಸಿರುಗುಪ್ಪ ಪೊಲೀಸ್ ಉಪಾಧೀಕ್ಷಕ ಮಾಲತೇಶ ಕೂನಬೇವ್ ಮಾರ್ಗದರ್ಶನದಲ್ಲಿ ತೆಕ್ಕಲಕೋಟೆ ವೃತ್ತ ನಿರೀಕ್ಷಕ ಚಂದನ್ ಗೋಪಾಲ್.ವಿ, ಸಿರಿಗೇರಿ ಠಾಣೆಯ ಪಿ.ಎಸ್.ಐ ಶಶಿಧರ.ವೈ, ಹಾಗೂ ಪೇದೆಗಳಾದ ರೋಷನ್ ಜಮೀರ್, ಗಂಗಾಧರ, ಮಹೇಶ ಬಣಕಾರ್ ಹಾಗೂ ಗಾದಿಲಿಂಗಪ್ಪ, ಪ್ರಭಾಕರ, ರಾಮಕೃಷ್ಣ, ಅಮರೇಶ ಭಾಗವಹಿಸಿದ್ದರು.

ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ.ಶೋಭಾರಾಣಿ ವಿ.ಜೆ, ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು