E-PAPER
17 Nov 2026, 12:21:34 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಚುನಾವಣಾ ಪ್ರಚಾರ ವೆಚ್ಚ: ದರಗಳ ನಿಗದಿ- ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಚುನಾವಣಾ ಪ್ರಚಾರ ವೆಚ್ಚ: ದರಗಳ ನಿಗದಿ- ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ-21: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ತಗಲುವ ಖರ್ಚು-ವೆಚ್ಚಗಳನ್ನು ಲೆಕ್ಕಾಚಾರ ಮಾಡಲು ಅನುಕೂಲವಾಗುವಂತೆ ವಿವಿಧ ಸೇವೆಗಳಿಗೆ ನಿಗದಿಪಡಿಸಲಾದ ಮಾರುಕಟ್ಟೆ ದರಗಳನ್ನು ಆಧರಿಸಿಯೇ ವೆಚ್ಚವನ್ನು ಲೆಕ್ಕ ಮಾಡಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಎಸ್.ಆರ್. ದರ ನಿಗದಿಪಡಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್.ಆರ್. ದರಗಳನ್ನು ಆರು ತಿಂಗಳ ಹಿಂದೆಯೇ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಿಗದಿಪಡಿಸಲಾಗಿರುತ್ತದೆ. ಆದಾಗ್ಯೂ ಪ್ರಸ್ತುತ ಮಾರುಕಟ್ಟೆ ದರಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಲಹೆಗಳನ್ನು ಆಧರಿಸಿ ದರಗಳಲ್ಲಿ ಅಗತ್ಯ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದರು.

ಚುನಾವಣಾ ಪ್ರಚಾರ ಸಂದರ್ಭದಲ್ಲಿ ಬಳಕೆ ಮಾಡುವ ಹೂವುಗಳ ದರವನ್ನು ಕಡಿಮೆಗೊಳಿಸಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಪ್ರತಿನಿಧಿಗಳು ಸಲಹೆ ನೀಡಿದರು.

ನಗರದಲ್ಲಿರುವ ಪುಷ್ಪ ಹರಾಜು ಕೇಂದ್ರದಿಂದ ಸಗಟು ಮಾರುಕಟ್ಟೆ ದರಗಳನ್ನು ಪಡೆದುಕೊಂಡು ದರಗಳನ್ನು ಪರಿಷ್ಕರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಇನ್ನೂ ಸಾಕಷ್ಟು ಕಾಲವಕಾಶ ಇರುವುದರಿಂದ ದರ ಪರಿಷ್ಕರಣೆ ಹಾಗೂ ಹೊಸ ಸಾಮಗ್ರಿ‌ಅಥವಾ ಸೇವೆಗಳ ಸೇರ್ಪಡೆಯನ್ನು ಮಾಡಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ತಮ್ಮ ಸಲಹೆ-ಅಭಿಪ್ರಾಯಗಳನ್ನು ತಿಳಿಸಬೇಕು ಎಂದು ಹೇಳಿದರು.

ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ:

2024 ಜನವರಿ 1 ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಅಲ್ಲಿಯವರೆಗೂ ಚುನಾವಣಾ ಆಯೋಗದ ಮಾರ್ಗಸೂಚಿ ಮತ್ತು ನಿರ್ದೇಶನದ ಪ್ರಕಾರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

27 ಅಕ್ಟೋಬರ್ ನಿಂದ ಡಿಸೆಂಬರ್ 9 ರವರೆಗಿನ ಅವಧಿಯಲ್ಲಿ ಕೈಗೊಳ್ಳಲಾಗಿರುವ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿಯನ್ನು ಒದಗಿಸಲಾಯಿತು.

ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರುಗಳ ಸೇರ್ಪಡೆ, ತೆಗೆದುಹಾಕುವಿಕೆ, ತಿದ್ದುಪಡಿ ಮತ್ತಿತರ ಪರಿಷ್ಕರಣೆ ಒಳಗೊಂಡ ಮತದಾರರ ಪಟ್ಟಿಯನ್ನು ನೀಡಲಾಯಿತು.


ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ದುಡಗುಂಟಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ‌ ನಿರ್ದೇಶಕರಾದ ಶ್ರೀಶೈಲ್ ಕಂಕಣವಾಡಿ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ರೇಷ್ಮಾ ತಾಳಿಕೋಟೆ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.