LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ತಂದಿರುವ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ' - ಹೆಚ್​ಡಿಕೆ

ಬೆಂಗಳೂರು: ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿಡೀಯೋವೊಂದನ್ನು ಎಕ್ಸ್​ನಲ್ಲಿ ಹಂಚಿಕೊಂಡಿರುವ ಕುಮಾರಸ್ವಾಮಿ, ಮಹಿಳೆಯರಿಗೆ ಶಕ್ತಿ ತುಂಬುತ್ತೇವೆಂದು ಹೊರಟ ಕಾಂಗ್ರೆಸ್ ಪಕ್ಷದ ಸರ್ಕಾರ ಹೆತ್ತ ಮಕ್ಕಳ ಜೀವ ತೆಗೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನು ಶಕ್ತಿ ಯೋಜನೆ ಬಗ್ಗೆ ನನ್ನ ತಕರಾರು ಇಲ್ಲ. ಆದರೆ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕು ಎನ್ನುವ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ. ರಾಜ್ಯ ಸರಕಾರ ಕೂಡಲೇ ಈ ಬಗ್ಗೆ ತುರ್ತುಕ್ರಮ ವಹಿಸಿ, ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎನ್ನುವುದು ನನ್ನ ಆಗ್ರಹವಾಗಿದೆ ಎಂದಿದ್ದಾರೆ.

ಒಂದೆಡೆ ಬಸ್ಸುಗಳ ಕೊರತೆ, ಇನ್ನೊಂದೆಡೆ ಮಹಿಳೆಯರು ಪ್ರವಾಸಿ ತಾಣಗಳಿಗೆ ಮುಗಿಬಿದ್ದ ಪರಿಣಾಮ ಮಕ್ಕಳು ರಾತ್ರಿಯಾದರೂ ಮನೆ ತಲುಪುತ್ತಿಲ್ಲ ಎನ್ನುವ ವರದಿ ಆಘಾತಕಾರಿ. ಗ್ರಾಮೀಣ ಪ್ರದೇಶದಲ್ಲಿ ಈ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸಿ, ಮಕ್ಕಳ ಪಾಡು ಕೇಳುವವರಿಲ್ಲವಾಗಿದೆ. ಪರೀಕ್ಷೆ ಸಮಯದಲ್ಲಿ ಅವರ ಸಂಕಷ್ಟ ಹೇಳತೀರದು. ಚುನಾವಣೆ ಲಾಭಕ್ಕಾಗಿ ಕಾಂಗ್ರೆಸ್ ರೂಪಿಸಿ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೂ ಎರವಾಗಿವೆ. ಮಹಿಳೆಯರಿಗೆ ಶಕ್ತಿ ತುಂಬುತ್ತೇವೆ ಎಂದು ಹೊರಟ ಆ ಪಕ್ಷದ ಸರಕಾರ, ಅವರು ಹೆತ್ತ ಮಕ್ಕಳ ಜೀವ ತೆಗೆಯುತ್ತಿದೆ. ಇದು ಕರ್ನಾಟಕದ ಮಾದರಿ! ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್‌ ಗಳ ಸಾಮೂಹಿಕ ರಜೆ; 78 ವಿಮಾನಗಳು ರದ್ದುಡಬಲ್ ಮರ್ಡರ್ : ಗಂಡ, ಮಕ್ಕಳನ್ನು ಬಿಟ್ಟು ತನ್ನ ಜೊತೆಗಿದ್ದ ಪ್ರಿಯತಮೆಯನ್ನೇ ಕೊಂದ ಪ್ರಿಯಕರಕೋವಿಶೀಲ್ಡ್ ಲಸಿಕೆಗಳನ್ನು ಹಿಂಪಡೆಯಲು ಅಸ್ಟ್ರಾಜೆನೆಕಾ ನಿರ್ಧಾರಪಾದದ ಸಮಸ್ಯೆಗಳಿಗೆ ಇಲ್ಲಿವೆ ಸುಲಭ ಉಪಾಯಉತ್ತರಾಣಿ ಗಿಡದ ಬೇರಿನಿಂದ ನೀವು ಕುಬೇರರಾಗಬಹುದು ಸಕಲ ಸಮಸ್ಯೆಗಳಿಗೂ ಈ ವನಸ್ಪತಿಯಿಂದ ಪರಿಹಾರ ಶತಸಿದ್ಧ!ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮಹತ್ವ ಸುದ್ದಿ.!ನಿನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಯಾವ ರಾಜ್ಯದಲ್ಲಿ ಎಷ್ಟು ಪ್ರಮಾಣ ಮತದಾನವಾಗಿದೆ.?ಎರಡನೇ ಹಂತದ ಚುನಾವಣೆಯಲ್ಲಿ ಯಾವ ಯಾವ ಕ್ಷೇತ್ರಗಳಲ್ಲಿ ಎಷ್ಟು ಮತದಾನ.?ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ.!ಕೈಮಗ್ಗ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ