LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚೈತ್ರಾ ಕುಂದಾಪುರ ಮತ್ತೊಂದು ಬಾಂಬ್ – ಸ್ವಾಮಿಜಿ ಸಿಕ್ಕಿಹಾಕಿಕೊಳ್ಳಿ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ

ಬೆಂಗಳೂರು : ಎಂಎಲ್ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ ಕುಂದಾಪುರ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ನಿನ್ನೆ ಬಂಧನಕ್ಕೊಳಗಾದ ಅವರನ್ನು ರಾತ್ರಿ ಬೆಂಗಳೂರಿನ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಸದ್ಯ 10 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.

ಇಂದು ಬೆಳಿಗ್ಗೆ ಸಿಸಿಬಿ ಕಚೇರಿಗೆ ಬರುವ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಚೈತ್ರಾ ಕುಂದಾಪುರ ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಇನ್ನೂ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮೊದಲು ಈ ಪ್ರಕರಣದಲ್ಲಿ ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಾ ಚೈತ್ರಾ ಪೊಲೀಸ್ ಕಚೇರಿ ಒಳಗೆ ಹೋಗಿದ್ದಾರೆ.

ಇಂದು ಸಿಸಿಬಿ ಎಸಿಪಿ ರೀನಾ ಸುವರ್ಣ ಅವರಿಂದ ವಿಚಾರಣೆ ನಡೆಯಲಿದೆ. ಬಳಿಕ ಹಣ ಪಡೆದ ಸ್ಥಳಗಳಲ್ಲಿ ಮಹಜರು ಮಾಡಲಿದ್ದಾರೆ. ಚೈತ್ರಾ ಕುಂದಾಪುರ ಅವರ ಜೊತೆಗೆ ಬಂಧಿತ ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್​ ಅವರನ್ನು ವಿಚಾರಣೆ ನಡೆಸಲಾಗುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST