ಜನರ ತೆರಿಗೆ ಹಣದಲ್ಲಿ ಡಿಸಿಎಂ ಡಿಕೆಶಿ ಅಂಧಾ ದರ್ಬಾರ್ - ಟ್ವೀಟ್ ಮೂಲಕ ಬಿಜೆಪಿ ಕಿಡಿ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ತೆರಿಗೆ ಹಣದಿಂದ ಶೋಕಿ ಮಾಡುತ್ತಿದೆ. ತಮ್ಮ ಅಂಧಾ ದರ್ಬಾರ್ ನಡೆಸುತ್ತಿದೆ ಎಂದು ಬಿಜೆಪಿ ನಾಯಕರು ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಕಿಕೊಂಡಿರುವ ದುಬಾರಿ ಬೆಲೆಯ ಶಾಲು ಪೋಸ್ಟ್ ಮಾಡಿ ಬಿಜೆಪಿ ವ್ಯಂಗ್ಯವಾಡಿದೆ. ಡಿಸಿಎಂ ಡಿಕೆ ಶಿವಕುಮಾರ್ ನಡೆಸುತ್ತಿರುವ ಅಂಧಾ ದರ್ಬಾರ್ ಕುರಿತು ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. 'ನಮ್ಮ ಕಾಸ್ಟ್ಲಿ ಕುಮಾರ್ ಅವರು ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ 59,500 ಆಗಿದೆ. ಬೆಲೆ ಏರಿಕೆಯಿಂದ ಜನ ಒಂದು ಹೊತ್ತಿನ ಊಟಕ್ಕೂ ತತ್ವಾರ ಅನುಭವಿಸುತ್ತಿದ್ದಾರೆ. ಆದರೆ, ಜನಪ್ರತಿನಿಧಿಗಳು ಮಾತ್ರ ಜನರ ತೆರಿಗೆ ದುಡ್ಡಿನಲ್ಲಿ ಶೋಕಿ ಮಾಡುತ್ತಿರುವುದು ನಿಜಕ್ಕೂ ದುರಂತ ಎಂದು ಕಿಡಿಕಾರಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.