LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ಉಗ್ರರ ದಾಳಿ

ಶ್ರೀನಗರ್ : ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಉಗ್ರರನ್ನು ಹಿಡಿಯಲು ಶೋಧ ಕಾರ್ಯಾಚರಣೆ ಕೈಗೊಂಡಿವೆ ಎಂದು ಮಾಧ್ಯಮಗಳಿಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮಾಧ್ಯಮಗಳಿಗೆ ದೊರೆತ ವರದಿ ಪ್ರಕಾರ ಅಖ್ನೂರ್ ನಗರದ ಜೋಗವಾನ್ ಎಂಬಲ್ಲಿ ಉಗ್ರಗಾಮಿಗಳು ಸೈನಿಕರ ವಾಹನಗಳ ಮೇಲೆ ಹಲವು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದ. ಮತ್ತೊಂದು ವರದಿ ಪ್ರಕಾರ ಅಖ್ನೂರ್ ಸೆಕ್ಟರ್‌ನ ಬಟ್ಟಲ್ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಗಳ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು ಇದೇ ಉಗ್ರರ ಗುಂಪಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಮೂರರಿಂದ ನಾಲ್ಕು ಉಗ್ರಗಾಮಿಗಳು 15ರಿಂದ 20 ಸುತ್ತು ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬಟ್ಟಲ್ ಎಂಬಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ಗುಂಪೊಂದರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಂತಿದ್ದ ಲಾರಿಗೆ ವ್ಯಾನ್‌ ಡಿಕ್ಕಿ : 7 ಮಕ್ಕಳ ಸಹಿತ 10 ಮಂದಿ ಸಾವುಉಡುಪಿ: ಸ್ನೇಹಿತರೇ ರಾತ್ರೋರಾತ್ರಿ ಮನೆಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆಚಾರ್ಮಾಡಿ ಘಾಟ್‌ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕಧರ್ಮಸ್ಥಳದ ವಿರುದ್ಧ ನಿರಂತರ ಅಪಪ್ರಚಾರ: ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!