LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ; ಓರ್ವ ಉಗ್ರನ ಹತ್ಯೆ

ಶ್ರೀನಗರ : ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತ್ಯೆಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ 47 ರೈಫಲ್, ಎರಡು ಹ್ಯಾಂಡ್ ಗ್ರೆನೇಡ್, ನಾಲ್ಕು ಮ್ಯಾಗಜೀನ್‌ಗಳು, ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲೋಲಾಬ್ ಪ್ರದೇಶದಲ್ಲಿ ಮಂಗಳವಾರ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಬುಧವಾರ ಸಹ ಈ ಕಾರ್ಯಾಚರಣೆ ಮುಂದುವರೆದಿದೆ. ಓರ್ವ ಉಗ್ರನ ಹತ್ಯೆಯ ನಂತರ ಈ ಕಾರ್ಯಾಚರಣೆ ನಿಲ್ಲಿಸಲಾಗಿದೆ.

ಮಂಗಳವಾರ ಬಂಡಿಪೋರಾ ಜಿಲ್ಲೆಯ ಕೆತ್ಸುನ್ ಅರಣ್ಯದಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆಗೈಯ್ಯಲಾಗಿತ್ತು. ಆ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ವಚನ: --ತೋಂಟದ ಸಿದ್ಧಲಿಂಗ ಶಿವಯೋಗಿಗಳು .!ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!