ಜಮ್ಮು – ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಕಾರು ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ.
https://bcsuddi.com/heavy-rain-school-and-college-holidays-in-these-three-districts/
ರಾಜೌರಿಯ ಥಾನಮಂಡಿ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಗಾಯಾಳುಗಳು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಅಸೋಸಿಯೇಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜೌರಿಯ ಜಿಎಂಸಿಯ ವೈದ್ಯಕೀಯ ಅಧೀಕ್ಷಕ ಡಾ. ಮೆಹಮೂದ್ ಹುಸೇನ್ ಬಜಾರ್ ತಿಳಿಸಿದ್ದಾರೆ ಪ್ರತ್ಯೇಕ ಘಟನೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ದೋಡಾ ಮತ್ತು ರಾಂಬನ್ ಜಿಲ್ಲೆಗಳಲ್ಲಿ ಮೂರು ವಾಹನಗಳು ಆಳವಾದ ಕಂದಕಕ್ಕೆ ಉರುಳಿ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.