LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಲೀಲ್ ಅಬ್ಬಾಸ್ ಜಿಲಾನಿ ಪಾಕ್‌‌ನ ಹಂಗಾಮಿ ಪ್ರಧಾನಿ?

ಪಾಕಿಸ್ತಾನ: ಈ ವರ್ಷಾಂತ್ಯದಲ್ಲಿ ಸಾರ್ವತ್ರಿಕ ಚುನಾವಣೆ ತಯಾರಿ ನಡೆಸುವ ನಿಟ್ಟಿನಲ್ಲಿ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯನ್ನು ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ನೇತೃತ್ವದ ಸಮ್ಮಿಶ್ರ ಸರ್ಕಾರವು ಅವಧಿಗೆ ಮುಂಚಿತವಾಗಿ ವಿಸರ್ಜಿಸುವ ಸಾಧ್ಯತೆ ಇದ್ದು, ಅಮೇರಿಕಾದ ಮಾಜಿ ರಾಯಭಾರಿ ಜಲೀಲ್ ಅಬ್ಬಾಸ್ ಜಿಲಾನಿ ಹಂಗಾಮಿ ಅವರು ಶೆಹಬಾಜ್ ಷರೀಫ್ ಅವರನ್ನು ಭೇಟಿಯಾಗಿದ್ದು ಜಲೀಲ್ ಅವರು ಪಾಕ್‌‌ನ ಹಂಗಾಮಿ ಪ್ರಧಾನಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಅಧಿಕೃತ ಘೋಷಣೆ ಆಗಲಿಲ್ಲ.

ಇತ್ತೀಚೆಗೆ ತನ್ನ ಸಂಸತ್ತನ್ನು ವಿಸರ್ಜಿಸಿರುವ ಪಾಕಿಸ್ತಾನ, ಜಲೀಲ್ ಅಬ್ಬಾಸ್ ಜಿಲಾನಿ ಅವರನ್ನು ಹಂಗಾಮಿ ಪ್ರಧಾನಿಯಾಗಿ ಹೆಸರಿಸಬಹುದು ಎಂದು ಜರ್ಮನಿಯ ಮಾಜಿ ಪಾಕಿಸ್ತಾನಿ ರಾಯಭಾರಿ ಮತ್ತು ಭಾರತದ ಹೈ ಕಮಿಷನರ್ ಅಬ್ದುಲ್ ಬಸಿತ್ ಹೇಳಿದ್ದಾರೆ.

ಪಾಕಿಸ್ತಾನದ ಹಂಗಾಮಿ ಪ್ರಧಾನ ಮಂತ್ರಿಯಾಗಿ ನೇಮಕಗೊಂಡ ಜಲೀಲ್ ಅಬ್ಬಾಸ್ ಜಿಲಾನಿ ಅವರಿಗೆ ಅಭಿನಂದನೆಗಳು ಎಂದು ಅಬ್ದುಲ್ ಬಸಿತ್ ಅವರು ಟ್ವೀಟ್ ಮಾಡಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಜಿಲಾನಿ ಅವರು ವಿದೇಶಿ ಕಚೇರಿಗಳನ್ನು ನಿರ್ವಹಿಸುವಲ್ಲಿ ಅನುಭವ ಹೊಂದಿದ್ದಾರೆ. ಅಲ್ಲದೆ ಯುನೈಟೆಡ್ ಸ್ಟೇಟ್ಸ್ ಸೇರಿದಂತೆ ಪಾಕಿಸ್ತಾನದ ರಾಯಭಾರಿಯಾಗಿ ಹಲವಾರು ಇತರ ದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Indian Navy Recruitment 2023: ಭಾರತೀಯ ನೌಕಾಪಡೆಯ 910 ಸೀನಿಯರ್ ಡ್ರಾಫ್ಟ್‌ಮ್ಯಾನ್ ಹುದ್ದೆಗಳಿಗೆ ಇಂದೇ ಅರ್ಜಿಯನ್ನು ಸಲ್ಲಿಸಿ.ಸಾಂತಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ...!ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!