LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಾತಿ ನಿಂದನೆ ಆರೋಪ: ವಕೀಲ ಕೆ. ಎನ್. ಜಗದೀಶ್ ಅರೆಸ್ಟ್..!

ಬೆಂಗಳೂರು: ಜಾತಿ ನಿಂದನೆ ಆರೋಪದ ಪ್ರಕರಣವೊಂದರಲ್ಲಿ ಖ್ಯಾತ  ವಕೀಲ ಕೆ. ಎನ್. ಜಗದೀಶ್ ಗೋವಾದಲ್ಲಿ ಬಂಧಿಸಲ್ಪಟ್ಟಿದ್ದಾರೆ.

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪದಲ್ಲಿ ವಕೀಲ ಕೆ.ಎನ್. ಜಗದೀಶ್ ಅವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಜಗದೀಶ್ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು. ಈ ನಡುವೆ ಜಗದೀಶ್ ಗೋವಾದಲ್ಲಿರುವ ಮಾಹಿತಿ ಪಡೆದ ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಅಲ್ಲಿಗೆ ತೆರಳಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST