LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಾತಿ ನಿಂದನೆ ಆರೋಪ; ಹಾಸ್ಯನಟ ಹುಲಿ ಕಾರ್ತಿಕ್‌ ವಿರುದ್ಧ ಎಫ್‌‌ಐಆರ್‌‌ ದಾಖಲು..!

ಬೆಂಗಳೂರು: ಖಾಸಗಿ ಸುದ್ದಿ ವಾಹನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಹಾಸ್ಯ ಕಾರ್ಯಕ್ರಮ ಗಿಚ್ಚಿ ಗಿಲಿಗಿಲಿ ಮೂರನೇ ಆವೃತ್ತಿಯ ವಿನ್ನರ್ ನಟ ಹುಲಿ ಕಾರ್ತಿಕ್ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ FIR ದಾಖಲಾಗಿದೆ. ಗಿಚ್ಚಿ ಗಿಲಿಗಿಲಿ ಮಾತ್ರವಲ್ಲದೇ ಸಿನಿಮಾಗಳಲ್ಲೂ ನಟಿಸಿ ಸೈ ಎನ್ನಿಸಿಕೊಂಡಿರುವ ಹುಲಿ ಕಾರ್ತಿಕ್ ಅವರು ಕೆಲ ದಿನಗಳ ಹಿಂದಷ್ಟೇ ಪ್ರಸಾರವಾದ ಖಾಸಗಿ ಸುದ್ದಿ ವಾಹಿನಿಯ ಅವಾರ್ಡ್ ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ವೇಳೆ ಭೋವಿ ಜನಾಂಗಕ್ಕೆ ನೋವುಂಟು ಮಾಡುವ ಹೇಳಿಕೆ ನೀಡಿದ್ದು, ಘಟನೆ ಸಂಬಂಧ ಲೋಕೇಶ್ ಎಂಬುವವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖಾಸಗಿ ಸುದ್ದಿ ವಾಹಿನಿಯ ಅವಾರ್ಡ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಾರ್ತಿಕ್, ಯಾವುದೋ ರೋಡಲ್ಲಿ ಬಿದ್ದಿರುವ ವಡ್ನನ ತರ ಇದ್ಯಾ. ಈ ಬೆಲ್ಟ್ ನನ್ನ ಕೈಯಲ್ಲಿ ಇದೆ ಎಂದರೆ ಅದಕ್ಕೆ ಸ್ಕ್ರಿಪ್ಟ್ ಕಾರಣ. ಸ್ಕ್ರಿಪ್ಟ್ ರೈಟರ್ ಸಂದೀಪ್ ಅವರಿಗೆ ಧನ್ಯವಾದ ಎಂದು ಹೇಳಿದ್ದರು. ಈ ಹೇಳಿಕೆಯೂ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದು, ಸ್ಕ್ರಿಪ್ಟ್ ರೈಟರ್, ಕಾರ್ಯಕ್ರಮದ ನಿರ್ದೇಶಕ ಹಾಗೂ ನಿರ್ಮಾಪಕರ ವಿರುದ್ಧವೂ ಜಾತಿ ನಿಂದನೆ ಆರೋಪದಡಿ ದೂರು ದಾಖಲಿಸಿದ್ದಾರೆ. ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್ ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕನ ವಿರುದ್ಧ ದೂರು ದಾಖಲಾಗಿದೆ. ಅನ್ನಪುರ್ಣೇಶ್ವರಿ ನಗರ ಪೊಲೀಸ್ ಠಾಣೆಯವರು ಈ ಸಂಬಂಧ FIR ದಾಖಲಿಸಿದ್ದಾರೆ. ಕೆಂಗೇರಿ ಉಪವಿಭಾಗ ಎಸಿಪಿಯಿಂದ ವಿಚಾರಣೆಗೆ ಹಾಜರಾಗಲು ಕಾರ್ತಿಕ್‌ಗೆ ನೋಟಿಸ್‌ ನೀಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಗ್ಯಾರಂಟಿಗಳಿಗೆ ಮೀಸಲಿಟ್ಟ ಹಣ ಯಾರು ನುಂಗುತ್ತಿದ್ದಾರೆ'?- ಸರಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆಅನ್ನಭಾಗ್ಯದ ದುಡ್ಡೂ ಬಂದಿಲ್ಲ, ಗೃಹಲಕ್ಷ್ಮಿ ಹಣವೂ ಜಮೆಯಾಗಿಲ್ಲ- ಕೆಲವು ತಿಂಗಳಿಂದ ಸ್ಥಗಿತಗೊಂಡಿರುವ ಗ್ಯಾರಂಟಿಗಳುಆಂಧ್ರದಲ್ಲಿ GB (Guillain Barre) ಸಿಂಡ್ರೋಮ್ ಗೆ 2 ಬಲಿ …..!'ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ'- ಸಿ.ಎಂ.ಸಿದ್ದರಾಮಯ್ಯವೈಮಾನಿಕ ದಾಳಿ : ಅಲ್ ಖೈದಾ ಸದಸ್ಯನನ್ನು ಹೊಡೆದುರುಳಿಸಿದ ಅಮೆರಿಕ ಸೇನೆಸಿದ್ದರಾಮಯ್ಯ ಸಹಿ ನಕಲು ಮಾಡಿ ವಂಚನೆ: ಆರೋಪಿ ಬಂಧನ'ಕೇಂದ್ರದಲ್ಲಿ ಬಿಜೆಪಿಗೆ ಬಹುಮತವಿಲ್ಲ, ಮೋದಿ ಬದಲಾವಣೆ ಆಗಬಹುದು'- ಸಂತೋಷ್ ಲಾಡ್ಇಂದಿನಿಂದ ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ; ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡರೈಲ್ವೆ ಮೆಗಾ ಸಬ್ ಅರ್ಬನ್ ಯೋಜನೆಗೆ ಪ್ಲ್ಯಾನ್ : ರೈತರಿಂದ ಆಕ್ರೋಶಫೆಬ್ರವರಿ 20ರಂದು ದೆಹಲಿ ಸಿಎಂ ಪ್ರಮಾಣವಚನ ಸ್ವೀಕಾರ ಸಾಧ್ಯತೆ