LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಾತಿ ಹಿಂಸಾಚಾರ ಪ್ರಕರಣ - ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಅಸ್ವಸ್ಥಗೊಂಡು ಅಪರಾಧಿಯೋರ್ವ ಸಾವು

ಕೊಪ್ಪಳ :ಮರಕುಂಬಿ ಗ್ರಾಮದಲ್ಲಿ 10 ವರ್ಷಗಳ ಹಿಂದೆ ನಡೆದಿದ್ದ ಜಾತಿ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಅಸ್ವಸ್ಥಗೊಂಡು ಅಪರಾಧಿಯೊಬ್ಬಸಾವಿಗೀಡಾಗಿರುವ ಘಟನೆ ನಡೆದಿದೆ.

ಮರಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಎಸಗಿದ ವಿಚಾರವಾಗಿ ಶಿಕ್ಷೆ ಪ್ರಕಟವಾಗಿತ್ತು. ರಾಮಣ್ಣ ಭೋವಿ (40) ಮೃತದುರ್ದೈವಿ ಎಂದು ತಿಳಿದುಬಂದಿದೆ. ರಾಮಣ್ಣ ಭೋವಿ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದೆ. ಗುರುವಾರ ನ್ಯಾಯಾಲಯಕ್ಕೆ ಕರೆದುಕೊಂಡು ಹೋದಾಗಲೂ ರಾಮಣ್ಣ ಅಸ್ವಸ್ಥನಾಗಿದ್ದನು.

ವೈದ್ಯರು ನ್ಯಾಯಾಲಯದಲ್ಲೇ ರಾಮಣ್ಣಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ನ್ಯಾಯಾಲಯದಿಂದ ಶಿಕ್ಷೆ ಪ್ರಕಟವಾದ ಬಳಿಕ ರಾಮಣ್ಣನನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ್ಯಾಯಾಲಯ ರಾಮಣ್ಣ ಭೋವಿಗೆ ಐದು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ಎರಡು ಸಾವಿರ ರೂ. ದಂಡ ವಿಧಿಸಿತ್ತು. ಶಿಕ್ಷೆಯ ನಂತರ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟ್ರಂಪ್‌ ನೀತಿಯನ್ನು ಟೀಕಿಸಿದ ಬಳಿಕ DOGE ಮುಖ್ಯಸ್ಥ ಹುದ್ದೆಯಿಂದ ಇಳಿದ ಮಸ್ಕ್‌ಮೇ.30ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಬೆಳಗ್ಗಿನ ಉಪಹಾರ ಆರಂಭ'ಮಂಗಳೂರಿನಲ್ಲಿ ಸೌಹಾರ್ದ ನೆಲೆಸುವ ಕುರಿತು ಚರ್ಚೆ-ಕಾನೂನಿಗಿಂತ ದೊಡ್ಡವರು ಯಾರಿಲ್ಲ'-ಸಿಎಂಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ರಾಜಸ್ಥಾನದ ಸರ್ಕಾರಿ ನೌಕರ ಅರೆಸ್ಟ್ಸರಣಿ ಕೊಲೆ, ಹಿಂಸಾಚಾರಕ್ಕೆ ಉನ್ನತ ಪೊಲೀಸ್‌ ಅಧಿಕಾರಿಗಳ ತಲೆದಂಡ?ಬೆಳಗಾವಿಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಲಷ್ಕರ್‌ನ ಇಬ್ಬರು ಹೈಬ್ರಿಡ್‌ ಉಗ್ರರ ಬಂಧನಹೃದಯಾಘಾತದಿಂದ ಕುಸಿದು ಬಿದ್ದು ಪದವಿ ವಿದ್ಯಾರ್ಥಿನಿ ಮೃತ್ಯು'26 ಮೃತ ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್‌ನಲ್ಲಿ ಸ್ಮಾರಕ ನಿರ್ಮಾಣ'- ಸಿಎಂ ಒಮರ್ ಅಬ್ದುಲ್ಲಾ ಘೋಷಣೆಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ : ಹೈಕಮಾಂಡ್‌ ಭೇಟಿಯಾದ ನಾಯಕರು