LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಾಮೀನು ಕೋರಿ ಕೇಜ್ರಿವಾಲ್ ಅರ್ಜಿ- ಸಿಬಿಐಗೆ ಕೋರ್ಟ್‌ ನೋಟಿಸ್‌

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಶುಕ್ರವಾರ ಕೇಂದ್ರ ತನಿಖಾ ದಳಕ್ಕೆ ನೋಟಿಸ್ ಜಾರಿ ಮಾಡಿದೆ.

ನ್ಯಾ. ನೀನಾ ಬನ್ಸಾಲ್ ಕೃಷ್ಣ ಸಿಬಿಐನ ಪ್ರತಿಕ್ರಿಯೆಯನ್ನು ಕೋರಿದ್ದು, ಪ್ರಕರಣದ ವಿಚಾರಣೆಯನ್ನು ಜುಲೈ 17 ಕ್ಕೆ ಮುಂದೂಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಮೊದಲು ವಿಚಾರಣಾ ನ್ಯಾಯಾಲಯಕ್ಕೆ ತೆರಳುವ ಬದಲು ನೇರವಾಗಿ ಜಾಮೀನಿಗಾಗಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ ಎಂಬ ಅಂಶವನ್ನು ನ್ಯಾಯಾಲಯ ಗಮನಿಸಿದೆ. ಈ ಅಂಶವನ್ನು ಮುಂದಿನ ಹಂತದಲ್ಲಿ ಪರಿಗಣಿಸಲಾಗುವುದು. ಇದಕ್ಕೂ ಮೊದಲು ಸಿಬಿಐ ಒಂದು ವಾರದಲ್ಲಿ ಉತ್ತರವನ್ನು ನೀಡಬೇಕು ಎಂದು ಹೈಕೋರ್ಟ್ ಹೇಳಿದೆ.

ಇಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ಸಿಬಿಐ ಬಂಧಿಸಿತ್ತು. ಜೂನ್ 20 ರಂದು ಇಡಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯದಿಂದ ಜಾಮೀನು ನೀಡಲಾಯಿತು. ಆದರೆ ನಂತರ ಜೂನ್ 25 ರಂದು ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತು.

ಈ ನಡುವೆ ಜೂನ್ 26ರಂದು ಸಿಬಿಐ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು, ಜೂನ್ 29ರವರೆಗೆ ಸಿಬಿಐ ಕಸ್ಟಡಿಗೆ ನೀಡಿದೆ. ಜೂನ್ 29 ರಂದು ಸಿಬಿಐ ಕಸ್ಟಡಿ ವಿಸ್ತರಣೆಯನ್ನು ಕೋರದ ಹಿನ್ನೆಲೆಯಲ್ಲಿ ಜುಲೈ 12 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು. ಇದೀಗ ಸಿಬಿಐ ಬಂಧನ ಪ್ರಶ್ನಿಸಿ ಜಾಮೀನು ಕೋರಿ ಕೇಜ್ರಿವಾಲ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೊಗರಿ ಬೆಳೆಗಾರರಿಗೆ ರಾಜ್ಯ ಸರಕಾರದಿಂದ ಖುಷಿ ಸುದ್ದಿ.!ನಾಗಗೊಂಡನಹಳ್ಳಿ ಶ್ರೀ ಚೆಲುಮೇರುದ್ರ ಸ್ವಾಮಿಯ ರಥೋತ್ಸವಸಾಲದಿಂದ ಮುಕ್ತಿಗೆ ಯಂತ್ರ ಮಂತ್ರ ಮತ್ತು ಪರಿಹಾರ ಇಲ್ಲಿದೆ.!ವಚನ: ಸಿದ್ಧರಾಮೇಶ್ವರ .!ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ಹಲವರಿಗೆ ವಂಚಿಸಿದ ಮಹಿಳೆ..!ಬೆಂಗಳೂರಿಗೆ ಬಿಸಿಲಾತಂಕ : ಫೆಬ್ರವರಿಯಲ್ಲೇ ಬಿಸಿಲು ಧಗೆ ಹೆಚ್ಚಳ - 42 ಡಿ.ಸೆ. ದಾಟುವ ನಿರೀಕ್ಷೆ!ರಾಜ್ಯದಲ್ಲಿ 5 ಹೊಸ ಮಿನಿ ಏರ್‌ಪೋರ್ಟ್‌ ನಿರ್ಮಾಣ..: ಎಲ್ಲೆಲ್ಲಿ ಗೊತ್ತಾ…?ಚುನಾವಣೆಯಲ್ಲಿ ಗೆದ್ದ ಬಿಜೆಪಿ: ದೆಹಲಿ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ'ಜನರ ಆದೇಶವನ್ನ ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ'- ಕೇಜ್ರಿವಾಲ್ನಿಮ್ಮಲ್ಲೇ ನೀವು ಇನ್ನಷ್ಟು ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿಬಿಡಿ!; APP- Congress ನ್ನು ಟ್ರೋಲ್ ಮಾಡಿದ ಒಮರ್ ಅಬ್ದುಲ್ಲಾ