LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಾರ್ಖಂಡ್ ವಿಧಾನಸಭೆ ಚುನಾವಣೆ: ಬಿಜೆಪಿ 68, ಮಿತ್ರಪಕ್ಷಗಳು 13 ಸ್ಥಾನಗಳಲ್ಲಿ ಸ್ಪರ್ಧೆ

ದೆಹಲಿ : ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ವಿಧಾನಸಭಾ ಚುನಾವಣೆಗೆ ಇಂದು ಸೀಟು ಹಂಚಿಕೆ ಪ್ರಕಟಿಸಿದೆ. ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 68 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮಿತ್ರ ಪಕ್ಷಗಳು 13 ಸ್ಥಾನದಲ್ಲಿ ಸ್ಪರ್ಧಿಸಲಿದೆ.

ರಾಂಚಿಯ ಬಿಜೆಪಿ ರಾಜ್ಯ ಪ್ರಧಾನ ಕಚೇರಿಯಲ್ಲಿ ಎಜೆಎಸ್‌ಯು ಪಕ್ಷದೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಸೀಟು ಹಂಚಿಕೆಯನ್ನು ಪ್ರಕಟಿಸಿದ ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿಯ ಜಾರ್ಖಂಡ್ ಚುನಾವಣಾ ಸಹ-ಪ್ರಭಾರಿ ಹಿಮಂತ ಬಿಸ್ವಾ ಶರ್ಮಾ, 'ಎಜೆಎಸ್‌ಯು 10 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ನಾವು ಒಮ್ಮತಕ್ಕೆ ಬಂದಿದ್ದೇವೆ. ಜೆಡಿಯು ಎರಡು ಸ್ಥಾನಗಳಲ್ಲಿ ಮತ್ತು ಎಲ್‌ಜೆಪಿ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ. ಉಳಿದ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಚೌಹಾಣ್ ಮತ್ತು ಜಾರ್ಖಂಡ್ ಬಿಜೆಪಿ ಮುಖ್ಯಸ್ಥ ಬಾಬುಲಾಲ್ ಮರಾಂಡಿ ಅವರಲ್ಲದೆ ಎಜೆಎಸ್‌ಯು ಮುಖ್ಯಸ್ಥ ಸುದೇಶ್ ಮಹ್ತೋ ಮತ್ತು ಇತರ ಪಕ್ಷದ ನಾಯಕರು ಉಪಸ್ಥಿತರಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಎಲ್ಲಾ ಕಷ್ಟಗಳ ಪರಿಹಾರಕ್ಕೆ ಇಲ್ಲಿದೆ ಒಂದು ಸುಲಭ ದಾರಿ.!ವಚನ: -ಮಡಿವಾಳ ಮಾಚಿದೇವ .!ರಸ್ತೆ ಅಪಘಾತದ ಗಾಯಾಳುಗಳಿಗೆ ನಗದು ರಹಿತ ಉಚಿತ ಚಿಕಿತ್ಸಾ ಸೌಲಭ್ಯ - ಇಂದಿನಿಂದ ಜಾರಿಒಂದೇ ಸಲಕ್ಕೆ ಪಾಕ್‌ಗೆ 28,000 ಕ್ಯುಸೆಕ್ ನೀರು ಬಿಡುಗಡೆ- ಪ್ರವಾಹ ಭೀತಿಮಂಗಳೂರು:  ಮೀನು ವ್ಯಾಪಾರಿಯ ಹತ್ಯೆ ಯತ್ನ ಪ್ರಕರಣದಲ್ಲಿ ಕೋಡಿಕೆರೆ ಲೋಕು ಅರೆಸ್ಟ್..!ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ ಸೋನು ನಿಗಮ್..!ಅಕ್ರಮ ಗಣಿಗಾರಿಕೆ ಕೇಸ್: ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ತೀರ್ಪು-7 ವರ್ಷ ಜೈಲುಭದ್ರತಾ ಪಡೆಗಳ ಕಾರ್ಯಾಚರಣೆ: ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಶಕ್ಕೆಮಂಗಳೂರು ಹೈ ಅಲರ್ಟ್: ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಪಾಕಿಸ್ಥಾನಕ್ಕೆ ಮುಖಭಂಗ