LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಿಲ್ಲೆಯಲ್ಲಿ ಕಳೆದ ತಿಂಗಳು ಸುರಿದ ಮಳೆಯಿಂದ ಎಷ್ಟು ಹೆಕ್ಟೇರ್ ಬೆಳೆಹಾನಿ.?

 

ಚಿತ್ರದುರ್ಗ: ಕಳೆದ ಅಕ್ಟೋಬರ್ ಮಾಹೆಯಲ್ಲಿ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಕಳೆದ ಅಕ್ಟೋಬರ್ ಮಾಹೆಯಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಉಂಟಾದ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷಾ ತಂಡವು ಸ್ಥಳ ಪರಿಶೀಲನೆ ನಡೆಸಿ, ಬೆಳೆ ಹಾನಿ ಕ್ಷೇತ್ರಗಳ ಮಾಹಿತಿ ನೀಡಿದೆ.

ಜಿಲ್ಲೆಯಲ್ಲಿ ಒಟ್ಟು 914.45 ಹೆಕ್ಟೇರ್ ಕೃಷಿ ಬೆಳೆ ಹಾಗೂ 241.80 ತೋಟಗಾರಿಕೆ ಬೆಳೆ ಸೇರಿ ಒಟ್ಟು 1,156.25 ಹೆಕ್ಟೇರ್ ಕ್ಷೇತ್ರದಲ್ಲಿ ಬೆಳೆ ಹಾನಿಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 172.77 ಹೆಕ್ಟೇರ್ ಕೃಷಿ, 94.50 ತೋಟಗಾರಿಕೆ ಸೇರಿ 267.27 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 478.47 ಹೆಕ್ಟೇರ್ ಕೃಷಿ ಬೆಳೆ, 89.40 ಹೆಕ್ಟೇರ್ ತೋಟಗಾರಿಕೆ ಸೇರಿ 567.87 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 162.50 ಹೆಕ್ಟೇರ್ ಕೃಷಿ, 35 ಹೆಕ್ಟೇರ್ ತೋಟಗಾರಿಕೆ ಬೆಳೆ ಸೇರಿ 197.50 ಹೆಕ್ಟೇರ್ ಹಾನಿಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನಲ್ಲಿ 100.71 ಹೆಕ್ಟೇರ್ ಕೃಷಿ ಬೆಳೆ ಹಾಗೂ 22.90 ಹೆಕ್ಟೇರ್ ತೊಟಗಾರಿಕೆ ಬೆಳೆ ಸೇರಿ 123.61 ಹೆಕ್ಟೇರ್ ಬೆಳೆ ಹಾನಿಯಾಗಿದೆ.

ಬೆಳೆಹಾನಿಯಾದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕರಿಗಳ ಕಚೇರಿ ಸೇರಿದಂತೆ ಆಯಾ ತಾಲ್ಲೂಕು ತಹಶೀಲ್ದಾರ್ ಕಚೇರಿ, ಗ್ರಾಮ ಪಂಚಾಯತಿ ಕಚೇರಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಬುಧವಾರದಂದು ಪ್ರಕಟಿಸಲಾಗಿದೆ.  ಈ ಕುರಿತು ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ, ಸಂಬಂಧಪಟ್ಟ ತಹಶೀಲ್ದಾರ್, ಕೃಷಿ, ತೋಟಗಾರಿಕೆ ಇಲಾಖೆಯ ಕಚೇರಿಗಳಿಗೆ 7 ದಿನಗಳೊಳಗಾಗಿ ಸಲ್ಲಿಸಬಹುದು. ಈ ಅವಧಿಯಲ್ಲಿ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದಿದ್ದರೆ ಪಟ್ಟಿಯನ್ನು ಅಂತಿಮಗೊಳಿಸಿ ನಿಯಮಾನುಸಾರ ಪರಿಹಾರ ಪಾವತಿಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ವಚನ: --ತೋಂಟದ ಸಿದ್ಧಲಿಂಗ ಶಿವಯೋಗಿಗಳು .!ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ