LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮರಕುಂಬಿಯ 98 ಅಪರಾಧಿಗಳಿಗೆ ಜಾಮೀನು ಮಂಜೂರು

ಧಾರವಾಡ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರು ಮತ್ತು ಸವರ್ಣೀಯರ ನಡುವೆ ನಡೆದ ಗಲಾಟೆಗೆ ಸಂಬಂಧಪಟ್ಟಂತೆ ಅಪರಾಧಿಗಳಿಗೆ ಕೊಪ್ಪಳ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಧಾರವಾಡದ ಹೈಕೋರ್ಟ್ ವಿಭಾಗೀಯ ಪೀಠ ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿದೆ.

ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 98 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಆದರೆ ಇದೀಗ 99 ಜನ ಅಪರಾಧಿಗಳ ಪೈಕಿ 98 ಮಂದಿಗೆ ಧಾರವಾಡದ ಹೈಕೋರ್ಟ್ ಜಾಮೀನು ನೀಡಿದೆ.

ಕೊಪ್ಪಳದ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ 98 ಮಂದಿ ಅಪರಾಧಿಗಳು ಅ.28 ರಂದು ಧಾರವಾಡ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಇಬ್ಬರು ನ್ಯಾಯಮೂರ್ತಿಗಳಿದ್ದ ವಿಭಾಗೀಯ ಪೀಠವು 98 ಮಂದಿ ಅಪರಾಧಿಗಳಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಈ ಬಗ್ಗೆ ಮಾತನಾಡಿದ ವಕೀಲರು, ಕೊಪ್ಪಳದ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ತಡೆ ನೀಡಿರುವ ಧಾರವಾಡ ಹೈಕೋರ್ಟ್, ಪ್ರಕರಣದ ಎ1 ಆರೋಪಿ ಮಂಜುನಾಥ ಎಂಬುವವರನ್ನು ಹೊರತುಪಡಿಸಿ, ಉಳಿದ ಎಲ್ಲ ಅಪರಾಧಿಗಳಿಗೆ ಜಾಮೀನು ನೀಡಿದೆ. ಮಂಜುನಾಥ ಜಾಮೀನಿಗೆ ಅರ್ಜಿ ಹಾಕದೇ ಇದ್ದಿದ್ದರಿಂದ ಆತನಿಗೆ ಜಾಮೀನು ದೊರೆತಿಲ್ಲ ಎಂದು ತಿಳಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಯುಭಾರ ಕುಸಿತ : ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ.!ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?