LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜು 22ರಿಂದ ಅಂಗನವಾಡಿಗಳಲ್ಲಿ ಎಲ್​ಕೆಜಿ-ಯುಕೆಜಿ ಆರಂಭ: ಮಹತ್ವದ ಮಾಹಿತಿ ಇಲ್ಲಿದೆ ನೋಡಿ

ಬೆಂಗಳೂರು: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ, ಯು.ಕೆ.ಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ K ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು ಎಂದರು.

ಗವರ್ನಮೆಂಟ್ ಮಾಂಟೆಸ್ಸರಿ ಆರಂಭ
ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

 

30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದರು.

 

ಸಮಾಜಕ್ಕೆ ಅಂಗನವಾಡಿ ಕೊಡುಗೆ ಅಪಾರ. ಕಳೆದ 50 ವರ್ಷಗಳಿಂದ ಅಂಗನವಾಡಿ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿವೆ. ಇನ್ಮುಂದೆ ಗವರ್ನಮೆಂಟ್ ಮಾಂಟೆಸ್ಸರಿ ಆಗಿ ಬದಲಾಗಲಿದ್ದು, ಇತರ ಶಾಲೆಗಳಿಗಿಂತ ನಮ್ಮ ಅಂಗನವಾಡಿ ಕೇಂದ್ರದ ಮಕ್ಕಳು ಹೆಚ್ಚು ಸುರಕ್ಷಿತವಾಗಿರುತ್ತವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನ