LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಪಕ್ಷದ ಉನ್ನತ ಮಟ್ಟದ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಿದ್ದಾರೆ.

ಈ ಸಂಚಾಲಕರನ್ನಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾ ನಾಯಕ ಅವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.

ಸದಸ್ಯರಾಗಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್, ಸಾ.ರಾ. ಮಹೇಶ್, ವೆಂಕಟರಾವ್ ನಾಡಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು, ಶಾಸಕರಾದ ಎಂ.ಟಿ. ಕೃಷ್ಣಪ್ಪ, ಎಸ್.ಎಲ್. ಬೋಜೇಗೌಡ, ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ.

*ಪ್ರಚಾರ ಸಮಿತಿಗೆ ವೈ ಎಸ್ ವಿ ದತ್ತ ನಾಯಕತ್ವ*

ಜೆಡಿಎಸ್ ಪ್ರಚಾರ ಸಮಿತಿಯನ್ನು ರಾಜ್ಯಾಧ್ಯಕರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಚನೆ ಮಾಡಿದ್ದು, ಸಮಿತಿ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ವೈ ಎಸ್ ವಿ ದತ್ತ ಅವರನ್ನು ನೇಮಕ ಮಾಡಿದ್ದಾರೆ.

ಸದಸ್ಯರಾಗಿ ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಸುರೇಶ್ ಗೌಡ, ಶಾಸಕ ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಟಿ.ಎನ್. ಜವರಾಯಿಗೌಡ, ಮಾಜಿ ಶಾಸಕರಾದ ಡಾ. ಕೆ. ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಶಾಸಕರಾದ ಭೀಮನಗೌಡ (ರಾಜುಗೌಡ) ಪಾಟೀಲ್, ಜಿ.ಡಿ. ಹರೀಶ್ ಗೌಡ, ಸ್ವರೂಪ್ ಪ್ರಕಾಶ್, ಎಂ.ಆರ್. ಮಂಜುನಾಥ್, ಕೆ. ವಿವೇಕಾನಂದ, ಸಿ.ಎನ್. ಮಂಜೇಗೌಡ, ಡಾ. ಸೂರಜ್ ರೇವಣ್ಣ, ಹಿರಿಯ ನಾಯಕ ಸುಧಾಕರ್ ಎಸ್.ಶೆಟ್ಟಿ ಅವರು ಸದಸ್ಯರಾಗಿದ್ದಾರೆ.

*ಡಿ. ನಾಗರಾಜಯ್ಯ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ*

ಮಾಜಿ ಸಚಿವರಾದ ಡಿ. ನಾಗರಾಜಯ್ಯ ಅವರನ್ನು ಜೆಡಿಎಸ್ ಶಿಸ್ತುಪಾಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಮಾಜಿ ಸಂಸದ ಕುಪೇಂದ್ರರೆಡ್ಡಿ, ಶಾಸಕ ಜಿ.ಕೆ. ವೆಂಕಟಾಶಿವಾರೆಡ್ಡಿ, ಮಾಜಿ ಶಾಸಕರಾದ ಕೆ.ಎಸ್.ಲಿಂಗೇಶ್, ಕೆ. ಮಹದೇವ, ಆರ್. ಚೌಡರೆಡ್ಡಿ, ಪಿ.ಆರ್ ಸುಧಾಕರ್ ಲಾಲ್, ಎಲ್.ಎನ್. ನಿಸರ್ಗ ನಾರಾಯಣಸ್ವಾಮಿ, ಡಾ. ಕೆ. ಶ್ರೀನಿವಾಸಮೂರ್ತಿ, ಶಾಸಕ ಹೆಚ್. ಟಿ. ಮಂಜುನಾಥ್ ಸದಸ್ಯರಾಗಿದ್ದಾರೆ.

*ಗ್ರೇಟರ್ ಬೆಂಗಳೂರು ಪಾಲಿಕೆಗಳಿಗೆ ಉಸ್ತುವಾರಿಗಳ ನೇಮಕ*

ಹೊಸದಾಗಿ ರಚನೆ ಆಗಿರುವ ಗ್ರೇಟರ್ ಬೆಂಗಳೂರು ಐದು ಪಾಲಿಕೆಗಳ ಉಸ್ತುವಾರಿಗಳನ್ನಾಗಿ ಈ ಕೆಳಕಂಡವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು ನಗರದ ಕೇಂದ್ರ, ಪಶ್ಚಿಮ,ದಕ್ಷಿಣ, ಪೂರ್ವ, ಉತ್ತರ ಪಾಲಿಕೆಗಳಿಗೆ ಜೆಡಿಎಸ್ ಉಸ್ತುವಾರಿ ಸಮಿತಿ ಅಧ್ಯಕ್ಷರನ್ನಾಗಿ ಅರಕಲಗೂಡು ಶಾಸಕ ಎ. ಮಂಜು ಅವರನ್ನು ನೇಮಕ ಮಾಡಲಾಗಿದೆ.

ಸದಸ್ಯರನ್ನಾಗಿ ಶಾಸಕರಾದ ಎಂ.ಟಿ. ಕೃಷ್ಣಪ್ಪ, ಟಿ.ಎ. ಶರವಣ, ಟಿ.ಎನ್. ಜವರಾಯಿಗೌಡ, ಸಿ.ಎನ್. ಮಂಜೇಗೌಡ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕೋರ್ ಕಮಿಟಿ ನೂತನ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಮಾಜಿ ಶಾಸಕರಾದ ಸುರೇಶ್‌ ಗೌಡ, ಎ. ಮಂಜುನಾಥ್, ಹೆಚ್.ಎಂ. ರಮೇಶ್‌ ಗೌಡ, ಕೆ.ಎ. ತಿಪ್ಪೇಸ್ವಾಮಿ, ಎಲ್.ಎನ್. ನಾರಾಯಣಸ್ವಾಮಿ, ಹಿರಿಯ ನಾಯಕ ಜಗದೀಶ್ ನಾಗರಾಜಯ್ಯ, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ, ಹಿರಿಯ ನಾಯಕ ಆರ್. ಪ್ರಕಾಶ್ ಅವರುಗಳು ಸದಸ್ಯರಾಗಿರುತ್ತಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ