LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟಿಕೆಟ್ ನಿರಾಕರಣೆ - ನೆಲಕ್ಕೆ ಬಿದ್ದು ಬಿಕ್ಕಳಿಸಿ ಅತ್ತ ಬಿಆರ್‌ಎಸ್ ಮುಖಂಡ

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯು ಮುಂಬರುವ ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ತೆಲಂಗಾಣ ಮಾಜಿ ಉಪಮುಖ್ಯಮಂತ್ರಿ ತಾಟಿಕೊಂಡ ರಾಜಯ್ಯ ನೆಲಕ್ಕೆ ಬಿದ್ದು ಅತ್ತು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜಯ್ಯ ಅವರಿಗೆ ಟಿಕೆಟ್ ನಿರಾಕರಿಸಿದ ಬಿಆರ್‌ಎಸ್ ಪಕ್ಷವು ಮತ್ತೊರ್ವ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಿರಿಯ ಮುಖಂಡ ಕದಿಯಂ ಶ್ರೀಹರಿ ಅವರನ್ನು ಕಣಕ್ಕಿಳಿಸಿದೆ. ಇದರಿಂದ ರಾಜಯ್ಯ ಅವರು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಮುಂದೆ ಮಂಡಿಯೂರಿ ಕುಳಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು 2014 ರಲ್ಲಿ ತೆಲಂಗಾಣ ರಚನೆಯ ಬಳಿಕ ರಾಜಯ್ಯ ಅವರು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಬಳಿಕ ಅವರಿಗೆ ಆರೋಗ್ಯ ಖಾತೆ ನೀಡಲಾಗಿತ್ತು. ಆದರೆ ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ 2015ರಲ್ಲಿ ರಾಜಯ್ಯ ಅವರನ್ನು ಸಂಪುಟದಿಂದ ಕೈಬಿಟ್ಟಿದ್ದರು.

ಈ ಬಾರಿ ತಮ್ಮದೇ ಪಕ್ಷದ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ರಾಜಯ್ಯ ಅವರಿಗೆ ಟಿಕೆಟ್‌ ನಿರಾಕರಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗಳೂರು: ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಕೆನಡಾ: ದೇವಸ್ಥಾನದ ಅಧ್ಯಕ್ಷ್ಯರ ಪುತ್ರನ ಮನೆಯ ಮೇಲೆ ಗುಂಡಿನ ದಾಳಿ - ಖಲಿಸ್ತಾನಿಗಳ ಕೈವಾಡ ಶಂಕೆಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲು