LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

 

ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ನಿಗಮಗಳಾದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭೀವೃದ್ಧಿ ನಿಗಮ ಹಾಗೂ ಪ.ಜಾತಿ ಅಲೆಮಾರಿ, ಅರೆ ಅಲೆಮಾರಿಗಳ ಅಭಿವೃದ್ಧಿ ನಿಗಮಗಳಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.10 ಕೊನೆಯ ದಿನವಾಗಿದೆ.

ಪರಿಶಿಷ್ಟ ಜಾತಿ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-1, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-2, ಉದ್ಯಮಶೀಲತಾ ಅಭಿವೃದ್ಧಿ ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.

ಈ ಯೋಜನೆಗಳ ಕುರಿತಾಗಿ ಸವಿವರವಾದ ಮಾಹಿತಿಯನ್ನು ಸಮಾಜ ಕಲ್ಯಾಣ ಇಲಾಖೆಯ ಸಾಲ ಸೇವೆಗಳ ಪೋರ್ಟಲ್ ವೆಬ್‌ಸೈಟ್  https://swdcorp.karnataka.gov.in      ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

ಆಸಕ್ತರು  https://sevasindhu.karnataka.gov.in     ತಂತ್ರಾAಶದ ಮೂಲಕ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 2023-24ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 08194-200214 ಅಥವಾ ಆಯಾ ತಾಲ್ಲೂಕಿನ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್