ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಿ : ವೇದಿಕೆ ಮೇಲೆಯೇ ಸಿಎಂಗೆ ಸ್ವಾಮೀಜಿ ನೇರ ಮನವಿ
ಬೆಂಗಳೂರು : ಶೀಘ್ರದಲ್ಲಿಯೇ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿದೆಯೇ? ಸಿಎಂ ಬದಲಾವಣೆಯಾಗಲಿದ್ದಾರಾ? ಎಂಬ ಶಂಕೆ ಮೂಡುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ನೇರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ನಿಮ್ಮ ಸ್ಥಾನವನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ಮನವಿ ಮಾಡಿರುವ ಘಟನೆಯೊಂದು ನಡೆದಿದೆ. ಬೆಂಗಳೂರಿನಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ಚಂದ್ರಶೇಖರ ಸ್ವಾಮೀಜಿ, ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಇನ್ನೂ ಆ ಭಾಗ್ಯ ಸಿಕ್ಕಿಲ್ಲ. ಹಾಗಾಗಿ ‘ಸಿಎಂ ಸಿದ್ದರಾಮಯ್ಯನವರೇ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ’ ಎಂದು ಮನವಿ ಮಾಡಿದ್ದಾರೆ. ನಿಮಗೆ ಅನುಭವವಿದೆ, ಈಗ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಕೊಡಿ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ. ವೇದಿಕೆ ಮೇಲೆಯೇ ಸ್ವಾಮೀಜಿಯೊಬ್ಬರ ಈ ಬೇಡಿಕೆ ಸರ್ಕಾರದಲ್ಲಿ ಸಂಚಲನ ಸೃಷ್ಟಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.