LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಡಿಕೆಶಿ ಅಸಲಿ ಸೊಸೈಟಿ ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ'- ಹೆಚ್‌ಡಿಕೆ

ಬೆಂಗಳೂರು: ದಲಿತರಿಗೆ ಸಿಗಬೇಕಾದ ನಿವೇಶನಗಳನ್ನ ಡಿಸಿಎಂ ಡಿಕೆ ಶಿವಕುಮಾರ್ ಲಪಟಾಯಿಸಿದ್ದಾರೆ. ಅಸಲಿ ಸೊಸೈಟಿ ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಪಾದಯಾತ್ರ ವೇಳೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ದಲಿತರಿಗೆ ಸೇರಬೇಕಾದ 68 ಎಕರೆ ಜಮೀನನ್ನು ಡಿಸಿಎಂ ಲಪಟಾಯಿಸಿದ್ದಾರೆ. ಇವರ ಬಳಿ ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ. ನಾನು ಸಿನಿಮಾ ವಿತರಕ ಆಗಿದ್ದಾಗ ಭೂಮಿ ಖರೀದಿಸಿದ್ದೆ. ಯಾರಿಗೂ ಮೋಸ ಮಾಡಲಿಲ್ಲ. ವಂಚನೆ ಮಾಡಿ ಭೂಮಿ ಖರೀದಿಸಿದ್ದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಮದು ವಾಗ್ದಾಳಿ ನಡೆಸಿದ್ದಾರೆ.

ಹೆಣ್ಣು ಮಗಳೊಬ್ಬಳನ್ನ ಕಿಡ್ನ್ಯಾಪ್ ಮಾಡಿ ಬೆದರಿಕೆ ಹಾಕಿದ್ದು ಇವರು. ಆ ಹೆಣ್ಣುಮಗಳ ಕಿಡ್ನ್ಯಾಪ್ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ಸೈಟು ಬರೆಸಿಕೊಂಡಿದ್ದೀರಿ. ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು, ವಿಜಯೇಂದ್ರದು ಏನಿದೆ ನಿಮ್ಮ ಬಳಿ ಬಿಚ್ಚಿ? ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿ ಕಾರಿದ್ದಾರೆ.

ನಾನು ಬಿಚ್ಚೋಕೆ ಹೋದರೆ ನಿಮ್ಮದು ಪುಟ ಗಟ್ಟಲೆ ಇದೆ. ಅದನ್ನ ತನಿಖೆ ಮಾಡೋದಕ್ಕೆ ಹತ್ತತ್ತು ಸಿಬಿಐ, ಇಡಿ ಸಂಸ್ಥೆಗಳನ್ನ ಸ್ಥಾಪನೆ ಮಾಡ್ಬೇಕು. ಅಜ್ಜಯ್ಯನ ಬಗ್ಗೆ ಶಿವಕುಮಾರ್‌ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ನೀವು ಪ್ರಾಮಾಣಿಕವಾಗಿ ಬೆಳೆದು ಬಂದ್ರಾ ಅಂತ ಪ್ರಮಾಣ ಮಾಡಲಿ. ನಾನೂ ಪ್ರಮಾಣ ಮಾಡ್ತೇನೆ. ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆದಿರಿ ಅಂತ ಗೊತ್ತಿದೆ ಎಂದು ಹೇಳಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯ