ಡಿಕೆಶಿ ಮಾತಿನಂತೆ ಬಿ.ವೈ.ವಿಜಯೇಂದ್ರ ಪಾದಯಾತ್ರೆ.! ಬಸನಗೌಡ ಪಾಟೀಲ್ ಯತ್ನಾಳ್
ಬೆಳಗಾವಿ: ಮುಡಾ ಹಗರಣ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಪಾದಯಾತ್ರೆ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಡಿಕೆಶಿ ಮಾತಿನಂತೆ ಬಿ.ವೈ.ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಯತ್ನಾಳ್, ಮುಡಾ ಹೋರಾಟ ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಡಿ.ಕೆ.ಶಿವಕುಮಾರ್ ಮಾತಿನಂತೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಲು ಬಿ.ವೈ.ವಿಜಯೇಂದ್ರ ಮಾಡುತ್ತಿರುವ ಹೋರಟವಿದು ಎಂದು ಟಾಂಗ್ ನೀಡಿದ್ದಾರೆ.
ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಬಿಜೆಪಿಯಲ್ಲಿಯೇ ಇದ್ದಾಗ ನಡೆದಿರುವ ಹಗರಣವಿದು. ಈಗ ಅವರು ಕಾಂಗ್ರೆಸ್ ಸೇರಿದ್ದಾರೆ. ರಾಜೀವ್ ಯಾರ ನಿರ್ದೇಶನದ ಮೇರೆಗೆ ಕಾಂಗ್ರೆಸ್ ಸೇರಿದ ಎಂಬುದು ಎಲ್ಲರಿಗೂ ಗೊತ್ತಿದೆ. ಪಾದಯಾತ್ರೆಯಲ್ಲಿ ಹೊಂದಾಣಿಕೆ ರಾಜಕಾರಣವಿದೆ. ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಡಲು ವಿಜಯೇಂದ್ರ ನಡೆಸುತ್ತಿರುವ ಹೊರಾಟವಿದು ಎಂಬುದನ್ನು ಬಹಿರಂಗಪಡಿಸಬೇಕು. ಡಿ.ಕೆ.ಶಿವಕುಮಾರ್ ಆದೇಶದಂತೆ ಇವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.