LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನಲ್ಲಿ ತರಬೇತಿ: ಪ್ರವೇಶಕ್ಕಾಗಿ ಅರ್ಜಿ ಆಹ್ವಾನ


ಬಳ್ಳಾರಿ,ನ.29
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದಿoದ ಕಾಯನಿರ್ವಹಿಸುವ ಕಲಬುರಗಿಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ತರಬೇತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು/180 ದಿನಗಳ ಅವಧಿಯ ‘ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್’ ತರಬೇತಿ ನೀಡಲಾಗುತ್ತಿದ್ದು, 2026ರ ಜನವರಿಯಿಂದ ಪ್ರಾರಂಭವಾಗಲಿವೆ. ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸಹಕಾರ ಸಂಘ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶ ಕಲ್ಪಿಸಲಾಗಿದೆ.
ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.18 ರಷ್ಟು ಸ್ಥಾನಗಳನ್ನು ತರಬೇತಿಗಾಗಿ ಮೀಸಲಿರಿಸಲಾಗಿದೆ.
ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರಿ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ.500 ಶಿಷ್ಯವೇತನ ನೀಡಲಾಗುವುದು.
ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ “6 ತಿಂಗಳು/180 ದಿನಗಳ ವಿಶೇಷ “ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್” ತರಬೇತಿಯನ್ನು ಸಹ ನೀಡಲಾಗುವುದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರವರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 16 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು. ಈ ಅಭ್ಯರ್ಥಿಗಳಿಗೆ ಮಾಹೆಯಾನ ರೂ.600 ಶಿಷ್ಯವೇತನ ನೀಡಲಾಗುವುದು.
ಡಿ.ಸಿ.ಎಂ ತರಬೇತಿಯ ಅರ್ಜಿ ನಮೂನೆ ಮತ್ತು ವಿವರಣಾ ಪುಸ್ತಕವನ್ನು ಕಲಬುರಗಿ ತರಬೇತಿ ಸಂಸ್ಥೆಯಿoದ ಹಾಗೂ ತರಬೇತಿ ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಸಹಕಾರ ಯೂನಿಯನ್‌ಗಳಲ್ಲಿ (ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಹೊಸಪೇಟೆ) ಪಡೆಯಬಹುದು.
*ಅರ್ಜಿ ಪಡೆಯುವ ಮತ್ತು ಕಳುಹಿಸುವ ವಿಳಾಸ:*
ಪ್ರಾಂಶುಪಾಲರು,
ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್,
ಆದರ್ಶನಗರ, ಪ್ರಗತಿ ಕಾಲೋನಿ, ಸೇಡಂ ರಸ್ತೆ, ಕಲಬುರಗಿ-585105.
ಹೆಚ್ಚಿನ ಮಾಹಿತಿಗಾಗಿ ದೂ.08472-245340, ಮೊ.9916726886, ಮೊ.9742307153, ಮೊ.9113916753 ಗೆ ಸಂಪರ್ಕಿಸಬಹುದು ಎಂದು ಕಲಬುರಗಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು