E-PAPER
17 Nov 2026, 12:23:37 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮ

ಬೆಳಗಾವಿ-21: ದಿವಂಗತ ಡಿ. ದೇವರಾಜ ಅರಸು ಅವರು ಅಧಿಕಾರವನ್ನು ಕೇವಲ ಆಡಳಿತಕ್ಕೆ ಸೀಮಿತಗೊಳಿಸದೆ, ಸಮಾಜದ ಸುಧಾರಣೆಗೆ ಶ್ರಮಿಸಿದ ಬಡವರ ಬಂಧು ಹಾಗೂ ಜನಪರ ನಾಯಕರಾಗಿದ್ದರು ಎಂದು ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಗುರುವಾರ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಆಯೋಜಿಸಿದ್ದ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಅರಸು ಅವರು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ ಶ್ರೇಷ್ಠ ನಾಯಕರಾಗಿದ್ದು, ‘ಉಳುವವನೇ ಭೂಮಿಯ ಒಡೆಯ’ ಎಂಬ ಭೂ ಸುಧಾರಣಾ ಕಾಯ್ದೆ ಜಾರಿಗೊಳಿಸುವ ಮೂಲಕ ಸಾಮಾಜಿಕ ಸಮಾನತೆಗೆ ಭದ್ರ ಬುನಾದಿ ಹಾಕಿದರು. ಭೂ ಸುಧಾರಣೆಯಡಿ ಭೂಮಿಯನ್ನು ಬಡ ರೈತರಿಗೆ ಹಂಚಿಕೆ ಮಾಡಿರುವುದು ಐತಿಹಾಸಿಕ ಸಾಧನೆಯಾಗಿದೆ ಎಂದರು.
ಉಪನ್ಯಾಸಕರಾಗಿ ಮಾತನಾಡಿದ ಡಾ. ಪ್ರವೀಣಾ ಕೆ.ಎಸ್., ಡಿ. ದೇವರಾಜ ಅರಸು ಅವರು ತುಳಿತಕ್ಕೊಳಗಾದ ಸಮುದಾಯಗಳ ಧ್ವನಿಯಾಗಿ ಅನೇಕ ಸಾಮಾಜಿಕ ಸುಧಾರಣೆಗಳನ್ನು ಜಾರಿಗೆ ತಂದರು. 1972ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅವರು ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತಂದರು. 1973ರಲ್ಲಿ ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣ ಮಾಡಿದ್ದು ಅವರ ಪ್ರಮುಖ ಸಾಧನೆಗಳಲ್ಲಿ ಒಂದಾಗಿದೆ ಎಂದರು.
ಹಿಂದುಳಿದ ವರ್ಗಗಳ ಸ್ಥಿತಿಗತಿಗಳನ್ನು ಅಧ್ಯಯನ ಮಾಡಲು 1972ರಲ್ಲಿ ಎಲ್.ಜಿ. ಹಾವನೂರು ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಗೆ ವೈಜ್ಞಾನಿಕ ನೆಲೆ ಕಲ್ಪಿಸಿದರು. ಜೀತ ಪದ್ಧತಿಯಿಂದ ಸಾವಿರಾರು ಜನರನ್ನು ಮುಕ್ತಗೊಳಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಕೊಡುಗೆ ನೀಡಿದರು ಎಂದು ವಿವರಿಸಿದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಭವ್ಯ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯು ಚನ್ನಮ್ಮ ವೃತ್ತ, ಕೃಷ್ಣದೇವರಾಯ ವೃತ್ತದ ಮೂಲಕ ಕುಮಾರ ಗಂಧರ್ವ ರಂಗಮಂದಿರ ತಲುಪಿತು. ಭುಜಂಗ ಕಲಾ ಯಕ್ಷಗಾನ ತಂಡ, ಬೀರಸಿದ್ದೇಶ್ವರ ಡೊಳ್ಳು ಕುಣಿತ ಹಾಗೂ ವಿವಿಧ ವೇಷಧಾರಿ ಕಲಾವಿದರ ಪ್ರದರ್ಶನ ಮೆರವಣಿಗೆಗೆ ಮೆರುಗು ನೀಡಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು, ಗಣ್ಯರು, ವಸತಿ ನಿಲಯಗಳ ನಿಲಯ ಪಾಲಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.