LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.03 ರಂದು ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ





ಬಳ್ಳಾರಿ,ನ.29

‘ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವ ಉತ್ತೇಜನ’ ಎಂಬ ಘೋಷವಾಕ್ಯದಡಿ ಡಿ.03 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಚಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಸಾಧನೆಗೈದ ವಿಕಲಚೇತನರಿಗೆ ಸನ್ಮಾನ ಮತ್ತು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪಧೆಗಳಲ್ಲಿ ವಿಜೇತರಾದ ವಿಕಲಚೇತನರಿಗೆ ಬಹುಮಾನ ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು