E-PAPER
17 Nov 2026, 12:22:44 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಡಿ. 26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ:ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ-೨೧: ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ. 26, 27ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವ 1924ರಲ್ಲಿ ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆ ವಹಿಸಿ, ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದು ಅವಿಸ್ಮರಣೀಯ ಕ್ಷಣ. ಈ ಘಟನೆಯನ್ನು ಮೆಲುಕು ಹಾಕಲು ಡಿಸೆಂಬರ್ 26ರಂದು ಗಾಂಧಿ ಬಾವಿ ಬಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕಾರಿ ಸಭೆ ಕರೆಯಲಾಗಿದೆ. ಡಿಸೆಂಬರ್ 27ರಂದು ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಎಲ್ಲ ಕಾಂಗ್ರೆಸ್ಸಿಗರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮ ಯಶಸ್ವಿಗಾಗಿ ಕಾನೂನು ಸಚಿವ ಎಚ್.ಕೆ. ಪಾಟೀಲ್, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯಿಲಿ, ಹಿರಿಯ ಮುಖಂಡರು ಸೇರಿದಂತೆ 60 ಜನರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಾರಂಭದಲ್ಲಿ ಕಾಂಗ್ರೆಸ್‌ ಪಕ್ಷದ ಮುಖಂಡರು, 150 ಸಂಸದರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ. ವಿಧಾನಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಉದ್ಘಾಟನೆ ನಡೆಯಲಿದ್ದು, ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಎಲ್ಲ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದರು.

ಮಹಾತ್ಮ ಗಾಂಧೀಜಿಯವರ ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಈಗಾಗಲೇ ಬೆಳಗಾವಿ ನಗರದಲ್ಲಿ ಲೈಟಿಂಗ್‌ ಅಳವಡಿಸಿದ್ದು, ಸಾರ್ವಜನಿಕರು ಲೈಟಿಂಗ್‌ನ್ನು ವೀಕ್ಷಿಸುತ್ತಿದ್ದಾರೆ. ಇನ್ನು ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಕ್ಷ ಕೆಲವು ನಿರ್ಣಯ ತೆಗೆದುಕೊಳ್ಳುತ್ತದೆ ಎಂದು ಇದೇ ವೇಳೆ ತಿಳಿಸಿದರು.

ಸಿಟಿ ರವಿ ಕೇಸ್‌ ಮುಂದುವರೆಸುವುದರಲ್ಲಿ ಅರ್ಥವಿಲ್ಲ: ಸಿಟಿ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಘಟನೆ ಆಗಿ ಹೋಗಿದೆ, ಮತ್ತೆ ಮುಂದುವರಿಸುವದರಲ್ಲಿ ಅರ್ಥ‌ ಇಲ್ಲ. ದೇಶದಲ್ಲಿ ಇಂಥ ಘಟನೆಗಳು ಹೊಸದಲ್ಲ, ಸಂಸತ್ತು ವಿಧಾನಸಭೆಯಲ್ಲಿ ನಡೆದಿವೆ. ಕ್ಷಮೆ ಕೇಳಿದ ಬಳಿಕ ಮುಗಿದು ಹೋಗಿವೆ, ಈಗಲೂ ಮುಗಿಸೋದು ಒಳ್ಳೆಯದು. ಸಾರ್ವಜನಿಕವಾಗಿ ಈ ಪ್ರಕರಣ ಮುಂದುವರೆಸುವುದು ಅನವಶ್ಯಕ ಎಂದರು.

ಸಿ.ಟಿ ರವಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಖಾನಾಪುರದಿಂದ ಶಿಫ್ಟ್ ಮಾಡಿದ್ದರು. ಯಾರ ನಿರ್ದೇಶನ ಮೇರೆಗೆ ಸಿ.ಟಿ ರವಿಯನ್ನು ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ ನಂಗೆ ಗೊತ್ತಿಲ್ಲ. ಸಿ.ಟಿ ರವಿಯನ್ನು ರಾತ್ರಿಯೇ ಕೋರ್ಟ್‌ಗೆ ಹಾಜರು ಮಾಡುವಂತೆ‌ ನಾನು ಪೊಲೀಸರಿಗೆ ಹೇಳಿದ್ದೆ. ಬೆಳಗಾವಿ ‌ಪೊಲೀಸರು ಅಷ್ಟು ಮಾಡಿದ್ರೆ ಇಷ್ಟೇಲ್ಲ ಆಗುತ್ತಿರಲಿಲ್ಲ, ಸಿಟಿ ರವಿ ಅವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಪೊಲೀಸರು ಅವರನ್ನು ರೌಂಡ್ಸ್‌ ಹೊಡಿಸಿದ್ದಾರೆ. ಇದರಲ್ಲಿ ಬೇರೆ ಯಾವ ಉದ್ದೇಶ ಇಲ್ಲ, ಈ ಪ್ರಕರಣ ಮುಂದುವರೆಸುವುದರಲ್ಲಿ ಯಾವುದೇ ಅರ್ಥವಿಲ್ಲ. ಏಕೆಂದರೆ ಅವರು ಅವಾಚ್ಯ ಶಬ್ದ ಬಳಿಸಿಲ್ಲವೆಂದು ಹೇಳುತ್ತಿದ್ದಾರೆ. ಹೀಗಾಗಿ ಈ ಕೇಸ್‌ ಇಲ್ಲಿಗೆ ಮುಗಿಸದರೆ ಒಳ್ಳೆಯದು. ಬೆಳಗಾವಿ ಸುವರ್ಣ ವಿಧಾನಸೌದಲ್ಲಿ ಇಂತಹ ಪ್ರಕರಣ ಈ ಹಿಂದೆ ಆಗಿರಲ್ಲಿಲ್ಲ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.