E-PAPER
17 Nov 2026, 12:22:38 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಬೆಳಗಾವಿ-22: ಯುವಜನರು ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ಶಿಕ್ಷಣ, ಶಿಸ್ತು ಹಾಗೂ ಉತ್ತಮ ಸಂಸ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಮಹಾಂತೇಶ ನಗರದ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬೆಳಗಾವಿ ನಗರ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾದಕ ವಸ್ತುಗಳ ವ್ಯಸನವು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಮತ್ತು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಕ್ಷಣಿಕ ಆಕರ್ಷಣೆಗೆ ಒಳಗಾಗದೆ ವಿದ್ಯಾರ್ಥಿಗಳು ತಮ್ಮ ಗುರಿಗಳತ್ತ ಗಮನಹರಿಸಬೇಕು. ಸಮಾಜದಿಂದ ಡ್ರಗ್ಸ್ ಪಿಡುಗನ್ನು ನಿರ್ಮೂಲನೆ ಮಾಡಲು ಪೊಲೀಸ್ ಇಲಾಖೆ, ಶಿಕ್ಷಣ ಸಂಸ್ಥೆಗಳು, ಪೋಷಕರು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಯುವಕರು ದೇಶದ ಅಮೂಲ್ಯ ಸಂಪತ್ತಾಗಿದ್ದು, ಅವರ ಶಕ್ತಿ ಮತ್ತು ಸಾಮರ್ಥ್ಯವನ್ನು ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರೋಗ್ಯವಂತ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಿಸಲು ಸಾಧ್ಯ ಎಂದು ಸಚಿವರು ಹೇಳಿದರು.

ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಇಂತಹ ಮಹತ್ವದ ಜಾಗೃತಿ ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ಮಾದಕ ವಸ್ತುಗಳಂತಹ ದುಶ್ಚಟಗಳಿಂದ ದೂರವಿದ್ದು ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಮಾತನಾಡಿ, ದುಶ್ಚಟಗಳನ್ನು ಹಿಂದೆ ಸಮಾಜ ಮತ್ತು ಪೋಷಕರು ಎಚ್ಚರಿಕೆಯಿಂದ ತಡೆಯುತ್ತಿದ್ದರು. ಆದರೆ ಈಗ ಸಿಗರೇಟ್ ಸೇವನೆಯಂತಹ ಅಭ್ಯಾಸಗಳನ್ನು ಸಾಮಾನ್ಯವೆಂದು ಪರಿಗಣಿಸುವ ಮನೋಭಾವ ಬೆಳೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಯುವಕರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೊರಸೆ ಮಾತನಾಡಿ, ದೇಶದಲ್ಲಿ ಅಂದಾಜು 18 ಕೋಟಿ ಹಾಗೂ ಕರ್ನಾಟಕದಲ್ಲಿ ಸುಮಾರು 17 ಲಕ್ಷ ಮಂದಿ ಮಾದಕ ವಸ್ತುಗಳ ವ್ಯಸನದ ಸಮಸ್ಯೆಗೆ ಒಳಗಾಗಿದ್ದಾರೆ ಎಂದು ಹೇಳಿದರು. ರಾಜ್ಯ ಸರ್ಕಾರದ ಡ್ರಗ್ಸ್ ವಿರೋಧಿ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ನಗರ ಮಟ್ಟದಲ್ಲಿ ಆರಂಭಿಸಿರುವ ಜಾಗೃತಿ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿ, ಡ್ರಗ್ಸ್ ವಿರುದ್ಧದ ಹೋರಾಟಕ್ಕೆ ಸಮಾಜದ ಎಲ್ಲ ವರ್ಗಗಳ ಸಹಕಾರ ಅಗತ್ಯವಾಗಿದೆ. ಇದನ್ನು ನಿಯಂತ್ರಿಸುವುದು ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿಯಲ್ಲ; ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕೈಜೋಡಿಸಿದಾಗ ಮಾತ್ರ ಪರಿಣಾಮಕಾರಿ ತಡೆ ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ "ಬೇಡ ಬ್ರೋ" ಹಾಗೂ "ರೈಸ್" ಅಭಿಯಾನದ ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್, ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಕೆ. ತ್ಯಾಗರಾಜ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.