LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ತನ್ನನ್ನು ಬಿಸಿನೆಸ್ ವಿರೋಧಿ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ'- ರಾಹುಲ್ ಗಾಂಧಿ

ನವದೆಹಲಿ : ತನ್ನನ್ನು ಬಿಸಿನೆಸ್ ವಿರೋಧಿ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ಆದರೆ, ತಾನು ಬಿಸಿನೆಸ್ ವಿರೋಧಿಯಲ್ಲ. ಆದರೆ, ಆರ್ಥಿಕ ಶಕ್ತಿಯ ಕೇಂದ್ರೀಕರಣದ ವಿರೋಧಿ, ಬಿಸಿನೆಸ್ ಏಕಸ್ವಾಮ್ಯದ ವಿರೋಧಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಉದ್ಯಮ ಮತ್ತು ಉದ್ಯಮಿಗಳ ವಿರೋಧಿ ಎನ್ನುವಂತಹ ಟೀಕೆಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿರುವ ಅವರು, ತಾನು ಬಿಸಿನೆಸ್ ವಿರೋಧಿ ಅಲ್ಲ ಎಂದು ಸ್ಪಷ್ಟಪಡಿಸುವ ಪ್ರಯತ್ನ ಮಾಡಿದ್ದಾರೆ.

ಬಿಜೆಪಿಯಲ್ಲಿರುವ ನನ್ನ ವಿರೋಧಿಗಳು ನನ್ನನ್ನು ಬಿಸಿನೆಸ್ ವಿರೋಧಿ ಎಂಬಂತೆ ಬಿಂಬಿಸುತ್ತಿದ್ದಾರೆ. ನಾನು ಬಿಸಿನೆಸ್ ವಿರೋಧಿಯಲ್ಲ. ಆದರೆ, ಏಕಸ್ವಾಮ್ಯತೆಯನ್ನು ವಿರೋಧಿಸುತ್ತೇನೆ. ಕೆಲವೇ ಉದ್ಯಮಿಗಳ ಪ್ರಾಬಲ್ಯವನ್ನು ವಿರೋಧಿಸುತ್ತೇನೆ. ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಆಗಿ ನಾನು ವೃತ್ತಿ ಆರಂಭಿಸಿದೆ. ಬಿಸಿನೆಸ್ ಯಶಸ್ವಿಯಾಗಲು ಏನು ಅಗತ್ಯ ಎಂಬುದನ್ನು ಬಲ್ಲೆ. ಆದರೆ, ನಾನು ಬಸಿನೆಸ್ ವಿರೋಧಿಯಲ್ಲ. ಏಕಸ್ವಾಮ್ಯದ ವಿರೋಧಿ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಲು ಬಯಸುತ್ತೇನೆ, ಎಂದು ರಾಹುಲ್ ಗಾಂಧಿ ಪೋಸ್ಟ್ ನಲ್ಲಿ ಹೇಳಿದ್ದಾರೆ.

ತಮ್ಮ ವಿಡಿಯೋದಲ್ಲಿ ಈಸ್ಟ್ ಇಂಡಿಯ ಕಂಪನಿಯ ಉದಾಹರಣೆ ನೀಡಿದ್ದಾರೆ. ಈಸ್ಟ್ ಇಂಡಿಯಾ ಕಂಪನಿ ಬಿಸಿನೆಸ್ ತಂತ್ರದಿಂದ ಅಲ್ಲ, ಏಕಸ್ವಾಮ್ಯ ನಿಯಂತ್ರಣ ಮೂಲಕ ಭಾರತವನ್ನು ಹಿಡಿತಕ್ಕೆ ತೆಗೆದುಕೊಂಡರು. ದುರ್ಬಲ ಮಹಾರಾಜರು ಮತ್ತು ನವಾಬರಿಗೆ ಬೆದರಿಕೆ ಹಾಕುತ್ತಾ, ಲಂಚ ನೀಡುತ್ತಾ, ಹೊಂದಾಣಿಕೆಗೆ ನೂಕುತ್ತಾ ಭಾರತವನ್ನು ಉಸಿರುಗಟ್ಟಿಸಿದರು. ಬ್ಯಾಂಕಿಂಗ್, ಆಡಳಿತ, ಮಾಹಿತಿ ಜಾಲಗಳನ್ನು ನಿಯಂತ್ರಿಸಿದರು. ನಾವು ಬೇರೆ ದೇಶಕ್ಕೆ ನಮ್ಮ ಸ್ವಾತಂತ್ರ‍್ಯ ಕಳೆದುಕೊಳ್ಳಲಿಲ್ಲ. ಬದಲಾಗಿ ಏಕಸ್ವಾಮ್ಯ ಉದ್ದಿಮೆಗೆ ಸೋತೆವು ಎಂದಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
9ನೇ ತರಗತಿ ವಿದ್ಯಾರ್ಥಿ 10ನೇ ತರಗತಿ ವಿದ್ಯಾರ್ಥಿಗೆ ಶಾಲೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಜಾಗ ಖರೀದಿಸಿದ ಕಿಚ್ಚ ಸುದೀಪ್ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆಸ್ಫೋಟಕ ತಿರುವು ಪಡೆದುಕೊಂಡ ಧರ್ಮಸ್ಥಳ ಪ್ರಕರಣಲಕ್ಷಗಟ್ಟಲೆ ಸಂಬಳದ ಕೆಲಸ ಬಿಟ್ಟು ಐಎಎಸ್ ಟಾಪರ್ ಆದ ಉತ್ಸವ್ ಗೌತಮ್ ಸಕ್ಸಸ್‌ ಸ್ಟೋರಿವಾಯುಭಾರ ಕುಸಿತ : ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ.!ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!