LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತನ್ನ ಮದುವೆ ಬಗ್ಗೆ ಅನುಷ್ಕಾ ಶೆಟ್ಟಿ ಕೊಟ್ಟ ಉತ್ತರವೇನು ಗೊತ್ತಾ?

ಮುಂಬೈ:ಕರವಾಳಿ ಬೆಡಗಿ ಅನುಷ್ಕಾ ಶೆಟ್ಟಿ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿ ಶೆಟ್ಟಿ’ ಸಿನಿಮಾ ಇದೇ ಸೆ.7ಕ್ಕೆ ಬಿಡುಗಡೆಗೊಳ್ಳಲಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಈ ವೇಳೆ, ಮದುವೆ, ಟ್ರೋಲ್ ಮತ್ತು ಪ್ರಭಾಸ್ ಜೊತೆಗಿನ ಸಿನಿಮಾ ಬಗ್ಗೆ ಅನುಷ್ಕಾ ಶೆಟ್ಟಿ ಮುಕ್ತವಾಗಿ ಮಾತನಾಡಿದ್ದಾರೆ.

ತಮ್ಮ ಮದುವೆಯ ವಿಚಾರದ ಬಗ್ಗೆ ನಟಿ ಮೌನ ಮುರಿದಿದ್ದಾರೆ. ಮದುವೆ ಏನಾದರೂ ಇದ್ಯಾ ಎನ್ನುವ ನಿರೂಪಕಿಯ ಪ್ರಶ್ನೆಗೆ ನಗುಮುಖದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮದುವೆಗೆ ವಿರುದ್ಧ ಅಲ್ಲ. ನಾನು ಸಂಗಾತಿಯನ್ನು ಹೊಂದಲು ಮತ್ತು ಕುಟುಂಬ ಆರಂಭಿಸಲು ಇಷ್ಟಪಡುತ್ತೇನೆ. ಅದರಲ್ಲಿ ನನಗೆ ನಂಬಿಕೆ ಇದೆ. ಆದರೆ ಅದು ಸ್ವಾಭಾವಿಕವಾಗಿ ಆಗಬೇಕು. ಬರೀ ಸಮಾಜದ ಒತ್ತಡಕ್ಕೆ ಆಗುವುದಲ್ಲ ಎಂದಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ನಾನು ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಸಿನಿಮಾ ರಿಲೀಸ್ ಸಂದರ್ಭದಲ್ಲಿ ಪ್ರಮೋಷನ್‌ಗೆ ಸಾಮಾಜಿಕ ಜಾಲತಾಣದ ಬಳಕೆ ಮಾಡುತ್ತೇನೆ. ಎಲ್ಲರಿಗೂ ಅವರದ್ದೇ ಆದ ಸಮಸ್ಯೆ ಇರುತ್ತದೆ. ಮೊದಲು ನಾವು ಮನುಷ್ಯರಾಗಬೇಕು ಎಂದಿದ್ದಾರೆ ಅನುಷ್ಕಾ ಶೆಟ್ಟಿ.

ನವೀನ್ ಪೋಲಿ ಶೆಟ್ಟಿಗೆ ಜೋಡಿಯಾಗಿ ಅನುಷ್ಕಾ ಶೆಟ್ಟಿ ನಟಿಸಿದ್ದಾರೆ. ಮೊದಲ ಬಾರಿಗೆ ಶೆಫ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ಬಹುಭಾಷೆಗಳಲ್ಲಿ ಸೆ.7ರಂದು ರಿಲೀಸ್ ಆಗುತ್ತಿದೆ. ಜವಾನ್ ಮುಂದೆ ಅನುಷ್ಕಾ ಸಿನಿಮಾ ಬಿಡುಗಡೆ ಆಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST